Breaking News

ಶಿಕಾರಿಪುರಕ್ಕೆ ವಿಜಯೇಂದ್ರ ಅಭ್ಯರ್ಥಿ: ಯಡಿಯೂರಪ್ಪ

Spread the love

ಬೆಂಗಳೂರು: ಚುನಾವಣ ರಾಜಕಾರಣದಲ್ಲಿ ಭಾಗಿಯಾಗುವುದಿಲ್ಲ ಎಂದು ಘೋಷಿಸಿರುವ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ತಮ್ಮ ಕಾರ್ಯಕ್ಷೇತ್ರ ಶಿಕಾರಿಪುರ ವಿಧಾನಸಭಾ ಕ್ಷೇತ್ರಕ್ಕೆ ಪುತ್ರ ಬಿ.ವೈ.

ವಿಜಯೇಂದ್ರ ಅವರನ್ನು ಉತ್ತರಾಧಿಕಾರಿಯಾಗಿ ಮತ್ತೆ ಘೋಷಣೆ ಮಾಡಿದ್ದಾರೆ.

ವಿಧಾನಸಭೆ ಕಲಾಪದ ಬಳಿಕ ಅಂಬೇಡ್ಕರ್‌ ಪ್ರತಿಮೆ ಹಾಗೂ ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ವಿಧಾನಸೌಧದಿಂದ ನಡೆದುಕೊಂಡೇ ಬಂದು ಗಾಂಧಿ ಪ್ರತಿಮೆಗೆ ಅವರು ನಮನ ಸಲ್ಲಿಸಿದರು. ಶಿಕಾರಿಪುರಕ್ಕೆ ಬಹುತೇಕ ವಿಜಯೇಂದ್ರ ಅವರೇ ಮುಂದಿನ ಚುನಾವಣೆಯ ಅಭ್ಯರ್ಥಿ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ನಮ್ಮ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡುತ್ತಾರೆ ಎಂದು ಹೇಳಿದರು.

ಇದೇ ತಿಂಗಳು 27ರಂದು ನನ್ನ ಜನ್ಮದಿನ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಶಿವಮೊಗ್ಗಕ್ಕೆ ಆಗಮಿಸಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಲಿದ್ದಾರೆ.

ರಾಜ್ಯದಲ್ಲಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಬಿ.ಸಿ.ನಾಗೇಶ್ ಅಗಲಿಕೆಗೆ ಸಚಿವ ಪ್ರಹ್ಲಾದ್ ಜೋಶಿ ಕಂಬನಿ

Spread the loveಬೆಂಗಳೂರು: ಸರಳ-ಸಜ್ಜನ, ಸ್ನೇಹಮಯಿ ಆಗಿದ್ದ ಮಾಜಿ ಶಿಕ್ಷಣ ಸಚಿವ, ತಿಪಟೂರು ಮಾಜಿ ಶಾಸಕ ಬಿ.ಸಿ.ನಾಗೇಶ್ ಅವರ ನಿಧನಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ