ಮೂಡಲಗಿ: ವಿದ್ಯಾರ್ಥಿಗಳು ಪಠ್ಯಕ್ರಮದ ಅಭ್ಯಾಸದೊಂದಿಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಿಕೊಂಡು ಭವಿಷ್ಯ ಕಟ್ಟಿಕೊಳ್ಳಬೇಕು. ಅಕ್ಷರದೊಂದಿಗೆ ಉತ್ತಮ ಸಂಸ್ಕಾರವೂ ದೊರೆಯಬೇಕು ಎಂದು ಮುಖ್ಯಾಧ್ಯಾಪಕ ಎ.ವಿ. ಗಿರೆಣ್ಣವರ ಹೇಳಿದರು.
ತುಕ್ಕಾನಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ತಾಯಂದಿರ ಸಭೆ ಹಾಗೂ ತಾಯಂದಿರ ಪಾದ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಾಲಕರು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿಕೊಂಡು ಅವರಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಮಕ್ಕಳ ಶಿಕ್ಷಣಕ್ಕೆ ಬಡತನ ಅಡ್ಡಿಯಾಗಬಾರದು ಎಂದು ಸಲಹೆ ನೀಡಿದರು.
ಶಿಕ್ಷಕ ಮಹಾದೇವ ಗೋಮಾಡಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಭವಿಷ್ಯ ಕಟ್ಟಿಕೊಳ್ಳುವಲ್ಲಿ ಪಾಲಕರ ಪಾತ್ರ ಮುಖ್ಯ. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳುವಲ್ಲಿ ತಂದೆ-ತಾಯಿಗಳು ನೆರವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಏಳು ಹಾಗೂ ಎಂಟನೇ ತರಗತಿ ವಿದ್ಯಾರ್ಥಿಗಳು ತಂದೆ-ತಾಯಂದಿರ ಪಾದಪೂಜೆ ಮಾಡಿ ಆಶೀರ್ವಾದ ಪಡೆದರು. ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಪ್ರತಿಜ್ಞೆ ಮಾಡಿದರು.
ಈ ವೇಳೆ ಗ್ರಾಪಂ ಸದಸ್ಯರಾದ ಯಲ್ಲವ್ವ ಬಿಳಿಗೌಡ್ರ, ಶಿಕ್ಷಕರಾದ ಕಿರಣ ಭಜಂತ್ರಿ, ಎಸ್.ಡಿ. ಲಮಾಣಿ, ವಿಮಲಾಕ್ಷಿ ತೋರಗಲ್, ಕುಸುಮಾ ಚಿಗರಿ, ಶೀಲಾ ಕುಲಕರ್ಣಿ, ಪುಷ್ಪಾ ಭರಮದೆ, ಲಕ್ಷ್ಮೀ ಹೆಬ್ಬಾಳ, ಅತಿಥಿ ಶಿಕ್ಷಕರಾದ ರೂಪಾ ಗದಾಡಿ, ರೇಖಾ ಗದಾಡಿ, ಜ್ಯೋತಿ ಉಪ್ಪಾರ, ಖಾತೂನ ನದಾಫ್, ಶಿವಲೀಲಾ ಹಣಮನ್ನವರ, ಹೊಳೆಪ್ಪಾ ಗದಾಡಿ ಇದ್ದರು.
Laxmi News 24×7