ಧಾರವಾಡ: ಸ್ವಾಮೀಜಿಗಳು ಸಮಾಜಕ್ಕೆ ಮಾದರಿ. ಅವರು ಮಠ ಬಿಟ್ಟು ವಿಧಾನಸೌಧದಲ್ಲಿ ಕಾಣಿಸಿಕೊಳ್ಳುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಾನು ನೋಡಿದಂತೆ ಬಹುತೇಕ ಸ್ವಾಮೀಜಿಗಳು ವಿಧಾನಸೌಧದಲ್ಲಿಯೇ ಇರುತ್ತಾರೆ.
ಇದು ಸರಿಯಾದ ಬೆಳವಣಿಗೆಯಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸ್ವಾಮೀಜಿಗಳು ರಾಜಕಾರಣಕ್ಕೆ ಬರಲಿ ಎಂದು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಚುನಾವಣೆಯಲ್ಲಿ ಮತ ಚಲಾವಣೆ ಮಾಡುವವರು ಬುದ್ಧಿವಂತರಾಗುವವರೆಗೂ ಒಳ್ಳೆಯ ಸರಕಾರ ಬರಲು ಸಾಧ್ಯವಿಲ್ಲ. ಇಂದಿನ ದಿನಗಳಲ್ಲಿ ರಾಜಕಾರಣ ಬಹಳ ಕಲುಷಿತವಾಗಿದೆ. ಪ್ರಜಾಪ್ರಭುತ್ವದಲ್ಲಿ ತಮ್ಮ ಹಕ್ಕು ಚಲಾಯಿಸುವ ಅನೇಕರಿಗೆ ಕರ್ತವ್ಯದ ಬಗ್ಗೆ ಅರಿವು ಇಲ್ಲವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.