Breaking News

ಮಕ್ಕಳೆ ರಾಜಕಾರಣಿ ಮಾತ್ರ ಆಗಬೇಡಿ: ಶಾಸಕ ಎಂ.ವೈ.ಪಾಟೀಲ್ ಕರೆ

Spread the love

ಲಬುರಗಿ: ಮಕ್ಕಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಂಡು ಗುರಿಯೊಂದಿಗೆ ಸಾಧನೆ ಮಾಡಬೇಕು ಎಂದು ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಮಕ್ಕಳಿಗೆ ಸಲಹೆ ನೀಡಿದರು.

ಕಲ್ಯಾಣ ಕರ್ನಾಟಕ ಉತ್ಸವದ ಹಿನ್ನೆಲೆಯಲ್ಲಿ ಕಲಬುರಗಿ ವಿವಿಯ ಬಯಲು ರಂಗಮಂದಿರ ಶನಿವಾರ ಆಯೋಜಿಸಿದ ಮಕ್ಕಳ ಉತ್ಸವ ಉದ್ಘಾಟಿಸಿ ಮಾತನಾಡಿ, ಇದು ಕೇವಲ ಉತ್ಸವ ಅಲ್ಲ, ನಮ್ಮ ಭಾಗದ ದೊಡ್ಡ ಹಬ್ಬವಾಗಿದೆ.

ಭಾರತ ಸ್ವಾತಂತ್ರ್ಯ ಮತ್ತು ನಿಜಾಮ ಶಾಹಿಯಿಂದ ಮುಕ್ತಿ ಪಡೆದ ಬಳಿಕ ಸ್ವಾತಂತ್ರೋತ್ಸವವನ್ನು ಮಾರ್ಪಾಟಾಗಿ ಕಲ್ಯಾಣ ಕರ್ನಾಟಕ ಉತ್ಸವವಾಗಿ ಆಚರಿಸಲಾಗುತ್ತಿದೆ. ಹೀಗಾಗಿ ಈ ಭಾಗದ ಎಲ್ಲರು ಆಸಕ್ತಿಯಿಂದ ಪಾಲ್ಗೊಳ್ಳಬೇಕು ಎಂದರು.

ರಾಜಕಾರಣಿ ಮಾತ್ರ ಆಗಬೇಡಿ
ಏಳು ಜಿಲ್ಲೆಯನ್ನು ಒಳಗೊಂಡು ಈ ಉತ್ಸವ ಆಚರಿಸಲಾಗುತ್ತಿದೆ. ಆದರೆ ಶುಕ್ರವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಉದ್ಘಾಟನೆ ಸಮಾರಂಭದಲ್ಲಿ ಈ ಭಾಗದ ಜನಪ್ರತಿನಿಧಿಗಳ ಗೈರು ಹಾಜರಿ ಕಾಣುತ್ತಿತ್ತು ಎಂದು ಬೇಸರ ವ್ಯಕ್ತ ಪಡಿಸಿದ ಅವರು, ಈಗಾಗಲೇ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ದೊಡ್ಡ ಮಟ್ಟದ ಉತ್ಸವಕ್ಕೆ ಎಲ್ಲ ಜನಪ್ರತಿನಿಧಿಗಳು ಭಾಗವಹಿಸಲು ಕೇಳಿಕೊಳ್ಳಲಾಯಿತು. ಆದರೆ ಅವರು ಭಾಗವಹಿಸದೆ ಇರುವುದು ನೋವು ತಂದಿದೆ ಎಂದರು.

ಮಕ್ಕಳು ಏನಾದರೂ ಆಗಿ ಆದರೆ ರಾಜಕಾರಣಿ ಮಾತ್ರ ಆಗಬೇಡಿ ಎಂದು ಸಲಹೆ ನೀಡಿದ ಅವರು, ಗುರಿ ಸಾಧಿಸಿ ಉನ್ನತ ಮಟ್ಟದ ಅಧಿಕಾರಿಗಳಾಗಿ ಹೊರಹೊಮ್ಮಿ ಎಂದರು.

ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಮಾತನಾಡಿ,ಕಲ್ಯಾಣ ಕರ್ನಾಟಕ ಭಾಗ ಕನ್ನಡಕ್ಕೆ ವಿಶೇಷ ಕೊಡುಗೆ ನೀಡಿದೆ. ಇಲ್ಲಿನ ಇತಿಹಾಸ ಎಲ್ಲರೂ ತಿಳಿದುಕೊಳ್ಳಬೇಕು ಎಂದರು. ಮಕ್ಕಳು ಸ್ಪರ್ಧಾತ್ಮಕ ಗುಣ ಬೆಳೆಸಿಕೊಂಡು ದೊಡ್ಡ ಕಲಾವಿದರಾಗಿ ಹೊರಹೊಮ್ಮಬೇಕು. ಈ ಭಾಗದ ಖ್ಯಾತ ಚಿತ್ರ ಕಲಾವಿದರಾದ ಎಸ್.ಎಂ.ಪಂಡಿತ, ನಾಡೋಜ ಖಂಡೇರಾವ್, ವಿ‌.ಜಿ.ಅಂದಾನಿ, ಎ.ಎಸ್.ಪಾಟೀಲ್ ಅವರ ಸಾಧನೆ ತಿಳಿದುಕೊಂದು ನೀವು ದೊಡ್ಡ ಕಲಾವಿದರಾಗಬೇಕು ಎಂದು ಕರೆ ನೀಡಿದರು. ರಾಜ್ಯ ಸರ್ಕಾರ ಶೀಘ್ರದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಪಟ್ಟಿ ಬಿಡುಗಡೆ ಮಾಡಲಿದ್ದು, ಅದರಲ್ಲಿ ನಮ್ಮ ಭಾಗದಿಂದ 5 ಸಾವಿರ ಶಿಕ್ಷಕರು ನೇಮಕವಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಕನಸು ನನಸಾಗಿಸಲು ಶ್ರಮಿಸಿ


Spread the love

About Laxminews 24x7

Check Also

ಫಾರೆಸ್ಟ್ ಗಾರ್ಡ್ ನಿಗೂಢವಾಗಿ ನಾಪತ್ತೆ, 6 ದಿನ ಕಳೆದರೂ ಸಿಗದ ಸುಳಿವು

Spread the loveಚಿಕ್ಕಮಗಳೂರು, ಜುಲೈ 02: ಜಿಲ್ಲೆಯ ಕಡೂರು (Kadur) ತಾಲೂಕಿನ ನೀಲಗಿರಿ ಪ್ಲಾಂಟೇಶನ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಫಾರೆಸ್ಟ್ ಗಾರ್ಡ್ (forest guard) ನಿಗೂಢವಾಗಿ ನಾಪತ್ತೆಯಾಗಿರುವಂತಹ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ