Breaking News

ಕೇಂದ್ರ ಸರ್ಕಾರದ ನಿರ್ಧಾರದಿಂದ ಪಡಿತರ ಚೀಟಿದಾರರಿಗೆ ಬಿಗ್ ರಿಲೀಫ್

Spread the love

ಕೇಂದ್ರ ಸರ್ಕಾರದ ನಿರ್ಧಾರದಿಂದ ಪಡಿತರ ಚೀಟಿದಾರರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ದೇಶಾದ್ಯಂತ ಹೊಸ ನಿಯಮ ಜಾರಿಯಾಗ್ತಿದೆ. ಈ ಮೂಲಕ ಪಡಿತರ ಚೀಟಿಯಿಂದ ಆಹಾರ ಧಾನ್ಯ ಪಡೆಯುವವರಿಗೆ ಸಿಹಿ ಸುದ್ದಿ ಸಿಕ್ಕಿದೆ.

ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲಾಗಿದ್ದು, ಇದರ ನಂತರ ಎಲ್ಲಾ ಅಂಗಡಿಗಳಲ್ಲಿ ಆನ್‌ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(ಪಿಒಎಸ್) ಸಾಧನಗಳನ್ನು ಕಡ್ಡಾಯಗೊಳಿಸಲಾಗಿದೆ.

 

ರಾಷ್ಟ್ರೀಯ ಆಹಾರ ಭದ್ರತಾ ಕಾನೂನಿನ ಅಡಿಯಲ್ಲಿ ಪಡಿತರ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಮಾಪಕಗಳೊಂದಿಗೆ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(ಇಪಿಒಎಸ್) ಸಾಧನಗಳನ್ನು ಲಿಂಕ್ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ, ಇದರಿಂದಾಗಿ ಫಲಾನುಭವಿಗಳು ಪೂರ್ಣ ಪ್ರಮಾಣದ ಆಹಾರ ಧಾನ್ಯಗಳನ್ನು ಪಡೆಯಬಹುದು. ಇದಕ್ಕಾಗಿ ಕಾನೂನು ನಿಯಮಗಳನ್ನು ತಿದ್ದುಪಡಿ ಮಾಡಿದೆ.

ನ್ಯಾಯಬೆಲೆ ಅಂಗಡಿಗಳನ್ನು ಆನ್‌ಲೈನ್ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(ಪಿಒಎಸ್) ಸಾಧನಗಳೊಂದಿಗೆ ಲಿಂಕ್ ಮಾಡಲಾಗಿದೆ. ಈಗ ಪಡಿತರ ತೂಕದಲ್ಲಿ ದೋಷಕ್ಕೆ ಅವಕಾಶವಿಲ್ಲ. ಸಾರ್ವಜನಿಕ ವಿತರಣಾ ವ್ಯವಸ್ಥೆಯ(ಪಿಡಿಎಸ್) ಫಲಾನುಭವಿಗಳಿಗೆ ಯಾವುದೇ ಸಂದರ್ಭದಲ್ಲಿ ಕಡಿಮೆ ಪಡಿತರ ಸಿಗದಂತೆ ನೋಡಿಕೊಳ್ಳಲು, ಹೈಬ್ರಿಡ್ ಮಾದರಿಯ ಪಾಯಿಂಟ್ ಆಫ್ ಸೇಲ್ ಯಂತ್ರಗಳನ್ನು ಪಡಿತರ ವಿತರಕರಿಗೆ ನೀಡಲಾಗಿದೆ. ನೆಟ್‌ವರ್ಕ್ ಇಲ್ಲದಿದ್ದರೆ ಈ ಯಂತ್ರಗಳು ಆಫ್‌ಲೈನ್ ಮತ್ತು ಆನ್‌ಲೈನ್ ಮೋಡ್‌ನಲ್ಲಿ ಕಾರ್ಯನಿರ್ವಹಿಸುತ್ತವೆ. ಇದೀಗ ಫಲಾನುಭವಿಗಳು ತಮ್ಮ ಡಿಜಿಟಲ್ ಪಡಿತರ ಚೀಟಿಯನ್ನು ಬಳಸಿಕೊಂಡು ದೇಶದ ಯಾವುದೇ ನ್ಯಾಯಬೆಲೆ ಅಂಗಡಿಯಿಂದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಸರಕುಗಳನ್ನು ಖರೀದಿಸಲು ಸಾಧ್ಯವಾಗುತ್ತದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಪಕ್ಷವಿರೋಧಿ ಚಟುವಟಿಕೆ ನಡೆಸುತ್ತಿರುವ ವಿಜಯೇಂದ್ರ ವಿರುದ್ಧವೂ ನೋಟೀಸ್ ಜಾರಿಯಾಗಬೇಕು: ರಮೇಶ್ ಜಾರಕಿಹೊಳಿ

Spread the loveದೆಹಲಿ: ಪ್ರಸ್ತುತವಾಗಿ ನಾವು ವಕ್ಫ್ ವಿರುದ್ಧ ಮಾಡಿದ ಹೋರಾಟದ ವರದಿಯನ್ನು ಜೆಪಿಸಿಗೆ ನೀಡಲು ಬಂದಿದ್ದೇವೆ, ಮುಂದಿನ ಸಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ