ಬೆಂಗಳೂರು: ಛತ್ತೀಸಗಢದ ರಾಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಮಹಾಧಿವೇಶನದ ವೇಳೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಮಾರು 45 ನಿಮಿಷ ರಹಸ್ಯ ಮಾತುಕತೆ ನಡೆಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇನ್ನೇನು ಕೆಲವೇ ದಿನಗಳಲ್ಲಿ ಹೊರಬೀಳಲಿದ್ದು, ಈ ಮಧ್ಯೆ ಇಬ್ಬರ ನಡುವಿನ ಚರ್ಚೆ ಟಿಕೆಟ್ ಆಕಾಂಕ್ಷಿಗಳ ಕುತೂಹಲ ಹೆಚ್ಚಿಸಿದೆ.
‘ಸಿದ್ದರಾಮಯ್ಯ ವಾಸ್ತವ್ಯವಿದ್ದ ಹೋಟೆಲ್ ಕೊಠಡಿಯ ಎದುರಿನ ಕೊಠಡಿಯಲ್ಲಿ ಖರ್ಗೆ ಕೂಡಾ ಇದ್ದಾರೆ. ಶನಿವಾರ ರಾತ್ರಿ ಖರ್ಗೆಯವರ ಕೊಠಡಿಗೆ ತೆರಳಿದ ಸಿದ್ದರಾಮಯ್ಯ ಅವರು ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದ್ದಾರೆ
Laxmi News 24×7