Breaking News

ಬೇಲ್ ಪಡೆಯಲ್ಲ, ಸ್ಟೇಷನ್‍ಗೆ ಹೋಗಲ್ಲ – ಕುಸುಮಾ ವಿರುದ್ಧದ ಎಫ್ಐಆರ್‌ಗೆ ಡಿಕೆಶಿ ಕಿಡಿ

Spread the love

ಬೆಂಗಳೂರು: ನಮ್ಮ ಅಭ್ಯರ್ಥಿ ಹೆಣ್ಣು ಮಗಳ ಮೇಲೆ ಹಾಗೂ ಸಿದ್ದರಾಮಯ್ಯ ಎಸ್ಕಾರ್ಟ್ ಡ್ರೈವರ್ ಮೇಲೆ ಎಫ್‍ಐಆರ್ ಆಗಿದೆ. ಈ ಎಫ್ಐಆರ್‌ಗೆ ನಾವು ಬೇಲ್ ಪಡೆಯಲ್ಲ, ಸ್ಟೇಷನ್‍ಗೂ ಹೋಗಲ್ಲ. ಇದಕ್ಕೆ ನಾವು ಹೆದರೋ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಕೆಶಿ, ಪ್ರಜಾಪ್ರಭುತ್ವದಲ್ಲಿ ಇಷ್ಟು ನೀಚವಾದ ರಾಜಕಾರಣ ನಾನು ಯಾವತ್ತೂ ನೋಡಿಲ್ಲ. ಕಾಂಗ್ರೆಸ್ ಪಕ್ಷದ ವಿದ್ಯಾವಂತ ಹೆಣ್ಣುಮಗಳು ಕಾನೂನು ಅರಿವಿರುವ ಹಾಗೂ ನೊಂದು-ಬೆಂದಿರುವ ಹೆಣ್ಣು ಮಗಳನ್ನ ನಾವು ಅಭ್ಯರ್ಥಿ ಮಾಡಿದ್ದೇವೆ ಎಂದರು.

ನಾವು ಸಮಯ ತೆಗೆದುಕೊಂಡು ನಾಮಪತ್ರ ಸಲ್ಲಿಸಲು ಹೋಗಿದ್ದೆವು. ನಾಮಿನೇಷನ್ ಫೈಲ್ ಮಾಡಿದ್ದೇವೆ. 1,100 ಕೇಸು ಬಿಜೆಪಿ ಕಾರ್ಯಕರ್ತರ ಮೇಲಿದೆ. ಕಾಂಗ್ರೆಸ್ಸಿಗರ ಮೇಲೆ ಸುಮಾರು 400ಕ್ಕೂ ಹೆಚ್ಚು ಕೇಸು ಹಾಕಿದ್ದಾರೆ. 3 ಜನ ಹೆಣ್ಣು ಮಕ್ಕಳು ಕಾರ್ಪೊರೇಟರ್ ಗಳ ಮೇಲೆ ದೌರ್ಜನ್ಯವಾಗಿದೆ. ಆಗ ನಾವು ಅಸಾಹಯಕರಾಗಿ ಇದ್ದೆವು. ಜೆಡಿಎಸ್ ಮೇಲೆ ಆರ್‍ಆರ್ ನಗರದಲ್ಲಿ 200ಕ್ಕೂ ಹೆಚ್ಚು ಕೇಸುಗಳಾಗಿವೆ. ಪೊಲೀಸರನ್ನ ಹಾಗೂ ಬಿಬಿಎಂಪಿ ಅಧಿಕಾರಿಗಳನ್ನ ವಶದಲ್ಲಿ ಇಟ್ಟುಕೊಂಡು ಈ ರೀತಿ ಮಾಡಲಾಗಿದೆ ಎಂದು ಡಿಕೆಶಿ ಗಂಭೀರ ಆರೋಪ ಮಾಡಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತನ ವಿರುದ್ಧ ಆನೇಕಲ್ ಸೇರಿದಂತೆ ಮೂರು ಕಡೆ ಕೇಸಾಗಿದೆ. ನಮ್ಮ ಅಭ್ಯರ್ಥಿ ಹೆಣ್ಣು ಮಗಳ ಮೇಲೆ ಹಾಗೂ ಸಿದ್ದರಾಮಯ್ಯ ಎಸ್ಕಾರ್ಟ್ ಡ್ರೈವರ್ ಮೇಲೆ ಎಫ್‍ಐಆರ್ ಆಗಿದೆ. ಸಿದ್ದರಾಮಯ್ಯ ಮೇಲೆ ಎಫ್‍ಐಆರ್ ಹಾಕ್ರಿ. ಅಲ್ಲಿದ್ದ ಪೊಲೀಸರ ಮೇಲೆ ಹಾಕ್ರಿ, ಆ ಅಭ್ಯರ್ಥಿ ಹೆಣ್ಣುಮಗಳ ಮೇಲೆ ಕೇಸು ಹಾಕಿ ಹೆದರಿಸಲು ಹೊರಟಿದ್ದಾರೆ. ಸರ್ಕಾರ ಇದಕ್ಕೆ ಕುಮ್ಮಕ್ಕಾಗಿ ನಿಂತಿದೆ. ನಾಮಪತ್ರ ಹಾಕಲು ಬಂದ ಅಭ್ಯರ್ಥಿ ಮೇಲೆ ಕೇಸು ಹಾಕುವಂತ ಸಣ್ಣ ಹಾಗೂ ನೀಚತನದ ರಾಜಕಾರಣ ಇನ್ನೊಂದಿಲ್ಲ. ಇದಕ್ಕೆ ಪೊಲೀಸರು ಹಾಗೂ ಸರ್ಕಾರವೇ ನೇರ ಕಾರಣ ಎಂದು ದೂರಿದರು.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ