ಮೈಸೂರು: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಮೊದಲ ಟೋಲ್ ಸಂಗ್ರಹ ಸೋಮವಾರದಿಂದ ಆರಂಭವಾಗಲಿದೆ.
ಬೆಂಗಳೂರು- ನಿಡಘಟ್ಟ ನಡುವಿನ ಶೇಷಗಿರಿಹಳ್ಳಿಯ ಟೋಲ್ ಕಾರ್ಯಾಚರಣೆ ಆರಂಭಿಸಲಾಗಿದೆ. ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ.
ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ. ರಸ್ತೆಗೆ ಶುಲ್ಕ ಸಂಗ್ರಹಿಸಲಾಗುತ್ತಿದೆ.
ಲಘು ವಾಹನಗಳ ಏಕಮುಖ ಸಂಚಾರಕ್ಕೆ 135 ರೂ. ಹಾಗೂ ಅದೇ ದಿನ ಮರು ಸಂಚಾರಕ್ಕೆ 205 ರೂ., ಲಘು ವಾಣಿಜ್ಯ ವಾಹನಗಳು/ಲಘು ಸರಕು ವಾಹನಗಳು/ಮಿನಿ ಬಸ್‌ಗಳ ಏಕಮುಖ ಸಂಚಾರಕ್ಕೆ 220 ರೂ. ಹಾಗೂ ಅದೇ ದಿನ ಮರು ಸಂಚಾರಕ್ಕೆ 320 ರೂ., ವಾಣಿಜ್ಯ ವಾಹನಗಳ (ಮೂರು ಆಕ್ಸೆಲ್) ಏಕಮುಖ ಸಂಚಾರಕ್ಕೆ 500 ರೂ. ನಿಗದಿ ಮಾಡಲಾಗಿದೆ.