ಬೈಲಹೊಂಗಲ: ಪಟ್ಟಣದ ಹೊಸೂರ ರಸ್ತೆಯ ಶತಮಾನ ಪೂರೈಸಿದ ಪುರಸಭೆ ಶೂರ ಸಂಗೊಳ್ಳಿ ರಾಯಣ್ಣ ಪ್ರೌಢಶಾಲೆಯಲ್ಲಿ ರವಿವಾರ ಮಧ್ಯಾಹ್ನ ಕಿಡಿಗೇಡಿಗಳಿಂದ ಶಾಲಾ ಕೊಠಡಿಗೆ ಬೆಂಕಿ ತಗುಲಿದ ಪರಿಣಾಮ ದಗದಗ ಹೊತ್ತಿ ಉರಿದ ಘಟನೆ ಜರುಗಿದೆ.
ಸುಡು ಬಿಸಿಲಿನಲ್ಲಿ ಶಾಲಾ ಕೊಠಡಿಗೆ ಬೆಂಕಿ ತಗುಲಿದ ಪರಿಣಾಮ ಬಾಗಿಲು ಇಲ್ಲದ ಕೊಠಡಿಯಲ್ಲಿದ್ದ ಹಳೆ ಡೆಸ್ಕ್, ಹಳೆಯ ಕಾಗದ ಪತ್ರಗಳು ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ.
ಸುಡು ಬಿಸಿಲಿನಲ್ಲಿ ಬೆಂಕಿಯ ಕೆನ್ನಾಲಿಗೆ ಜ್ವಾಲಾ ಮುಖಿಯಂತೆ ಕಂಡಿತು. ಕಿಡಗೇಡಿಗಳು ಹೊತ್ತಿಸಿದ ಬೆಂಕಿ
ಶಾಲೆಯ ಕೊಠಡಿಗಳನ್ನು ಆವರಿಸಿದ್ದರಿಂದ ಭಾರಿ ಪ್ರಮಾಣದಲ್ಲಿ ಹೊಗೆ ಆವರಿಸಿತು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.
ತಹಶೀಲ್ದಾರ ಜೆ.ಸಿ.ಅಷ್ಟಗಿಮಠ, ಕಂದಾಯ ನಿರೀಕ್ಷಕ ಸುರೇಶ ಮಾಳಗಿ, ಶಾಲೆ ಪ್ರಾಚಾರ್ಯರು, ಶಿಕ್ಷಕರು ಇದ್ದರು.