Breaking News

ಪ್ರಧಾನ್‌ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ 13ನೇ ಕಂತು ಇಂದು ಬಿಡುಗಡೆ

Spread the love

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದು ರಾಜ್ಯದ 49,96,924 ರೈತ ಕುಟುಂಬಗಳಿಗೆ ರೂ. 999.38 ಕೋಟಿ ರೂ.ಗಳನ್ನು ಆರ್ಥಿಕ ನೆರವಾಗಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತನ್ನು ನೇರವಾಗಿ ಡಿಬಿಟಿ ಮುಖಾಂತರ ಅವರುಗಳ ಖಾತೆಗಳಿಗೆ ಬಿಡುಗಡೆ ಮಾಡುವರು.

 

ಕರ್ನಾಟಕ ರಾಜ್ಯದಲ್ಲಿ ಭಾರತ ಸರ್ಕಾರದ ಪಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು 2018 ಡಿಸೆಂಬರ್ ನಿಂದ ಅನ್ವಯ ವಾಗುವಂತೆ ಫೆಬ್ರವರಿ 2019 ರಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ವಾರ್ಷಿಕ ರೂ.6000/-ಗಳ ಆರ್ಥಿಕ ನೆರವನ್ನು ರೂ.2000/-ಗಳಂತೆ ಮೂರು ಕಂತುಗಳಲ್ಲಿ ರೈತರಿಗೆ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತದೆ.

ಯೋಜನೆಯ ಪ್ರಾರಂಭದಿಂದ ಇಲ್ಲಿಯವರೆಗೆ ರೂ. 10933.20 ಕೋಟಿ ರೂ.ಗಳ ಆರ್ಥಿಕ ನೆರವನ್ನು ರೈತರಿಗೆ ನೀಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ