Breaking News

ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಿದ್ಧತೆ ಆರಂಭ

Spread the love

2023ರ ಡಿಸೆಂಬರ್ ತಿಂಗಳಿನಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು ಮಾಹಿತಿ ನೀಡಿದ್ದಾರೆ. ಮೈಸೂರು: 2023ರ ಡಿಸೆಂಬರ್ ತಿಂಗಳಿನಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು ಮಾಹಿತಿ ನೀಡಿದ್ದಾರೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇತ್ತೀಚೆಗೆ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗಿತ್ತು. ಮುಂದಿನ ಸಮ್ಮೇಳನವನ್ನು ಮಂಡ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ. ಶೀಘ್ರದಲ್ಲೇ ಮಂಡ್ಯದಲ್ಲಿ ಮೊದಲ ಪೂರ್ವಸಿದ್ಧತಾ ಸಭೆ ನಡೆಯಲಿದ್ದು, ಸಭೆಯಲ್ಲಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಪರಿಷತ್ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸಭೆ ಕುರಿತ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಬಾರಿಯ ಸಮ್ಮೇಳನದಲ್ಲಿ 87 ಪುಸ್ತಕಗಳನ್ನು ಬಿಡುಗಡೆ ಮಾಡಲು ಚಿಂತನೆ ನಡೆಸಲಾಗಿದೆ. ಇದೇ ವೇಳೆ ಬುವನೇಶ್ವರಿ ದೇವಿಯ ಭಾವಚಿತ್ರವಿರುವ ಕನ್ನಡವನ್ನು ಪರಿಷತ್ತು ಬಿಡುಗಡೆ ಮಾಡಲಿದೆ ಎಂದಿದ್ದಾರೆ. ಇದೇ ವೇಳೆ ಹಾವೇರಿಯಲ್ಲಿ ನಡೆದ ಸಮ್ಮೇಳನದಲ್ಲಿ ಒಂಬತ್ತು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದನ್ನು ಸ್ಮರಿಸಿದ ಅವರು, ಮೂರು ದಿನಗಳ ಉತ್ಸವದಲ್ಲಿ ಬುಕ್ ಸ್ಟಾಲ್ನಲ್ಲಿ ಆನ್ಲೈನ್ ವಹಿವಾಟು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಂತ್ರಜ್ಞಾನವನ್ನು ಅಳವಡಿಸಿಕೊಂಡು ಸಮ್ಮೇಳನಕ್ಕೆ ಬರುವವರಿಗೆ ಕುಡಿಯುವ ನೀರು, ಶೌಚಾಲಯ, ವಸತಿ, ಆಹಾರ ಮತ್ತು ಇತರ ಸೌಲಭ್ಯಗಳಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಂಡ್ಯದಲ್ಲಿ ಸಮ್ಮೇಳನ ನಡೆಸಲು 150 ಎಕರೆ ಭೂಮಿ, ಮೂರು ಪ್ರತ್ಯೇಕ ಸ್ಥಳಗಳು, ಭೋಜನಶಾಲೆ, ಬುಕ್ ಎಕ್ಸ್ಪೋ ಮತ್ತು ಇತರ ಸೌಲಭ್ಯಗಳನ್ನು ಒಂದೇ ಆವರಣದಲ್ಲಿ ತರಲು ಚಿಂತನೆ ನಡೆಸಲಾಗಿದೆ. ಸ್ಥಳವು ಪ್ಲಾಸ್ಟಿಕ್ ಬಳಕೆಯಿಂದ ಮುಕ್ತವಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಈ ನಡುವೆ 87ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ನಡೆಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಚ್ಎನ್ ಗೋಪಾಲಕೃಷ್ಣ ಅವರು ಪರಿಷತ್ತಿಗೆ ಕೃತಜ್ಞತೆ ಸಲ್ಲಿಸಿದ್ದು, ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲು ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ