ಬೆಂಗಳೂರು: 7ನೇ ವೇತನ ಆಯೋಗದ ಮಧ್ಯಂತರ ವರದಿ ಜಾರಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಕರೆ ಕೊಟ್ಟಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಬಂದ್ ಆಗುವ ಸಾಧ್ಯತೆ ದಟ್ಟವಾಗಿದೆ.
ಸರ್ಕಾರಿ ಶಾಲಾ ಶಿಕ್ಷಕರು ಶಾಲೆಗಳಿಗೆ ಕರ್ತವ್ಯಕ್ಕೆ ಹಾಜರಾಗದೇ ಮನೆಯಲ್ಲಿಯೇ ಇದ್ದು ಮುಷ್ಕರದಲ್ಲಿ ಭಾಗಿಯಾಗುವಂತೆ ಷಡಕ್ಷರಿ ಸೂಚಿಸಿದ್ದಾರೆ.
ಈ ನಿಟ್ಟಿನಲ್ಲಿ ನಾಳೆ ಶಾಲಾ ಶಿಕ್ಷಕರು ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆ ಇರುವುದರಿಂದ ರಾಜ್ಯಾದ್ಯಂತ ಶಾಲೆಗಳು ಬಂದ್ ಆಗುವ ಸಾಧ್ಯತೆ ಇದೆ.
Laxmi News 24×7