Breaking News

ನಾಳೆಯಿಂದ ರಾಜ್ಯಾದ್ಯಂತ ಶಾಲೆಗಳು ಬಂದ್?

Spread the love

ಬೆಂಗಳೂರು: 7ನೇ ವೇತನ ಆಯೋಗದ ಮಧ್ಯಂತರ ವರದಿ ಜಾರಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಕರೆ ಕೊಟ್ಟಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಬಂದ್ ಆಗುವ ಸಾಧ್ಯತೆ ದಟ್ಟವಾಗಿದೆ.

ಸರ್ಕಾರಿ ಶಾಲಾ ಶಿಕ್ಷಕರು ಶಾಲೆಗಳಿಗೆ ಕರ್ತವ್ಯಕ್ಕೆ ಹಾಜರಾಗದೇ ಮನೆಯಲ್ಲಿಯೇ ಇದ್ದು ಮುಷ್ಕರದಲ್ಲಿ ಭಾಗಿಯಾಗುವಂತೆ ಷಡಕ್ಷರಿ ಸೂಚಿಸಿದ್ದಾರೆ.

ಈ ನಿಟ್ಟಿನಲ್ಲಿ ನಾಳೆ ಶಾಲಾ ಶಿಕ್ಷಕರು ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆ ಇರುವುದರಿಂದ ರಾಜ್ಯಾದ್ಯಂತ ಶಾಲೆಗಳು ಬಂದ್ ಆಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ