Breaking News

ಕಲ್ಮೇಶ್ವರ ದೇವರ ಬೆಳ್ಳಿ ಮೂರ್ತಿ ಕಳವು

Spread the love

ವಲಗುಂದ: ತಾಲ್ಲೂಕಿನ ಶಿರಕೋಳ ಗ್ರಾಮದಲ್ಲಿರುವ ಕಲ್ಮೇಶ್ವರ ದೇವರ 11 ಕೆ.ಜಿ ತೂಕದ ಬೆಳ್ಳಿಯ ಮೂರ್ತಿ ಕಳ್ಳರು ಕಳವು ಮಾಡಿದ್ದಾರೆ.

ಭಾನುವಾರ ತಡರಾತ್ರಿ ಈ ಕೃತ್ಯ ನಡೆದಿದೆ. ಕಳ್ಳ ದೇವಸ್ಥಾನದಲ್ಲಿ ಅತ್ತ ಇತ್ತ ತಿರುಗಾಡಿದ್ದಾನೆ. ಅಲ್ಲಿ ಮಲಗಿದ್ದವರು ಎಚ್ಚರಗೊಳ್ಳದಂತೆ ನೋಡಿಕೊಂಡು, ಕೀಲಿ ಮುರಿದು ಗರ್ಭಗುಡಿ ಪ್ರವೇಶಿಸಿ, ಆ ಬೆಳ್ಳಿ ಮೂರ್ತಿ ತೆಗೆದುಕೊಂಡು ಪರಾರಿಯಾಗಿದ್ದಾನೆ.

ಈ ಘಟನೆ ದೃಶ್ಯ ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಜಮಾಯಿಸಿದ ಜನ: ಮೂರ್ತಿ ಕಳವು ಸುದ್ದಿ ತಿಳಿಯುತ್ತಿದ್ದಂತೆ ದೇವಸ್ಥಾನದ ಆವರಣದಲ್ಲಿ ಗ್ರಾಮಸ್ಥರು ಜಮಾಯಿಸಿದ್ದರು. ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಕಳವು ಕುರಿತು ನವಲಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ