Breaking News

ಕಳೆದ 24 ಗಂಟೆಯಲ್ಲಿ 67,708 ಜನರಲ್ಲಿ ಕೊರೊನಾ ಸೋಂಕು

Spread the love

ನವದೆಹಲಿ: ದೇಶದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 67,708 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 73,07,098 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 680 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,11,266ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 8,12,390 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 63,83,442 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ 11,36,183 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 9,12,26,305 ಜನರನ್ನು ಕೊವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದು ಐಸಿಎಂ ಆರ್ ತಿಳಿಸಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ