Home / ರಾಜಕೀಯ / ಐತಿಹಾಸಿಕ ವಿಶೇಷ ಕಾರಿಡಾರ್ ನಿರ್ಮಾಣಕ್ಕೆ ಅನುದಾನ: ಬನವಾಸಿಯಲ್ಲಿ ಸಿಎಂ ಬೊಮ್ಮಾಯಿ

ಐತಿಹಾಸಿಕ ವಿಶೇಷ ಕಾರಿಡಾರ್ ನಿರ್ಮಾಣಕ್ಕೆ ಅನುದಾನ: ಬನವಾಸಿಯಲ್ಲಿ ಸಿಎಂ ಬೊಮ್ಮಾಯಿ

Spread the love

ಕಾರವಾರ(ಬನವಾಸಿ): ಕನ್ನಡ ರಾಜ್ಯವನ್ನು ಆಳಿದ ರಾಜ್ಯ ಮನೆತನಗಳಾದ ಕದಂಬರು, ಚಾಲುಕ್ಯರು, ರಾಷ್ಟ್ರಕೂಟರ ಗತವೈಭವನ್ನು ಸಾರುವ ಕಾರ್ಯಕ್ರಮಗಳಿಗೆ ಬಜೆಟ್ ನಲ್ಲಿ ವಿಶೇಷ ಅನುದಾನ ನೀಡಲಾಗಿದ್ದು, ಐತಿಹಾಸಿಕ ವಿಶೇಷ ಕಾರಿಡಾರ್ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು.

ಪಂಪನ ಆಶಯದಂತೆ ಈ ಭಾಗದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಿರಸಿ ತಾಲೂಕಿನ ಬನವಾಸಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕದಂಬೋತ್ಸವ 2023ನ್ನು ಜ್ಯೋತಿ ಬೆಳಗಿಸಿ ಉದ್ಘಾಟಸಿ ಮಾತನಾಡಿದ ಅವರು, ಬನವಾಸಿಯು ಆದಿ ಕವಿ ಪಂಪ ಜನಿಸಿದ ನಾಡು. ಕನ್ನಡ ನಾಡಿಗೆ ಮುನ್ನುಡಿ ನೀಡಿದ ನಾಡಗಿದೆ. ಕದಂಬೋತ್ಸವನ್ನು ವಿಜೃಂಭಣೆಯಿಂದ ಮಾಡುತ್ತಿದ್ದೇವೆ. ಇದೆ ಸಂದರ್ಭದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ 3 ಸಾಹಿತಿಗಳಿಗೆ ಪಂಪ ಪ್ರಶಸ್ತಿಯನ್ನು ನೀಡುತ್ತಿದ್ದೇವೆ ಎಂದರು. ಬನವಾಸಿಯು ಸಾಹಿತ್ಯ, ಕಲೆಗೆ ಹೆಸರುವಾಸಿಯಾಗಿದೆ ಎಂದರು.

ಬನವಾಸಿ ಇಲ್ಲಿಯ ಐತಿಹಾಸಿಕ ಶ್ರೀ ಮಧುಕೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಮಧುಕೇಶ್ವರ ದೇವರ ಮಹಾಸ್ಯಂದನ ರಥವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಗಳವಾರ ಲೋಕಾರ್ಪಣೆ ಮಾಡಿದರು.

ಶಿವರಾಮ ಹೆಬ್ಬಾರ್ ಅವರು ಮಾತನಾಡಿ, 70 ಕೋಟಿ ವೆಚ್ಚದಲ್ಲಿ ನೀರಾವರಿ ಕಾಮಗಾರಿಗೆ ಚಾಲನೆ ನೀಡಲಾಗಿದೆ, ಮುಖ್ಯ ಮಂತ್ರಿಗಳು ಈ ವರ್ಷದ ಕದಂಬೋತ್ಸವ ಕಾರ್ಯಕ್ರಮಕ್ಕೆ 3 ಕೋಟಿ ನೀಡಿದ್ದಾರೆ ಎಂದರು.


Spread the love

About Laxminews 24x7

Check Also

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Spread the love ಬೆಂಗಳೂರು: ಒಂದು ತಿಂಗಳಿಂದ ನಡೆಯುತ್ತಿದ್ದ ಅಬ್ಬರದ ಪ್ರಚಾರಕ್ಕೆ ಬುಧವಾರ ತೆರೆ ಬೀಳಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ