Breaking News

ಚೆನ್ನೈ ಆಸ್ಪತ್ರೆಗೆ ದಾಖಲಾದ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ

Spread the love

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಕಿಡ್ನಿ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ದಾಮೋದರ ದಾಸ್ ಮೋದಿ ಮತ್ತು ಹೀರಾಬೆನ್‌ ಗೆ ಜನಿಸಿದ ಐದು ಮಕ್ಕಳಲ್ಲಿ ಪ್ರಹ್ಲಾದ್ ಮೋದಿ ನಾಲ್ಕನೆಯವರು.

ಅವರು ಗುಜರಾತ್‌ ನ ಅಹಮದಾಬಾದ್‌ ನಲ್ಲಿ ಕಿರಾಣಿ ಅಂಗಡಿ ಮತ್ತು ಟೈರ್ ಶೋರೂಮ್ ಹೊಂದಿದ್ದಾರೆ.

ಕಳೆದ ವರ್ಷ ಡಿಸೆಂಬರ್ 27 ರಂದು ಮೈಸೂರು ಬಳಿ ಪ್ರಹ್ಲಾದ್ ಮೋದಿ ಅಪಘಾತಕ್ಕೀಡಾಗಿದ್ದರು. ಅವರು ಕುಟುಂಬ ಸಮೇತ ಬಂಡೀಪುರದಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಅವರ ಕಾರು ಅಪಘಾತಕ್ಕೀಡಾಗಿತ್ತು.

 

2022 ಆಗಸ್ಟ್ 2 ರಂದು, ಪ್ರಹ್ಲಾದ್ ಮೋದಿ ಅವರು ಅಖಿಲ ಭಾರತ ನ್ಯಾಯಬೆಲೆ ಅಂಗಡಿ ವಿತರಕರ ಒಕ್ಕೂಟದ (AIFPSDF) ಹಲವಾರು ಸದಸ್ಯರೊಂದಿಗೆ ಸಂಘಟನೆಯ ವಿವಿಧ ಬೇಡಿಕೆಗಳೊಂದಿಗೆ ನವದೆಹಲಿಯ ಜಂತರ್ ಮಂತರ್‌ ನಲ್ಲಿ ಧರಣಿ ನಡೆಸಿದ್ದರು.


Spread the love

About Laxminews 24x7

Check Also

ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ

Spread the love ಉಗಾರದಲ್ಲಿ ಗರ್ಭಿಣಿ ಮಹಿಳೆ ಚೈತಾಲಿ ಪ್ರದೀಪ ಕಿರಣಗಿ ಹತ್ಯೆ ಹಿನ್ನೆಲೆ – ಗ್ರಾಮಸ್ಥರ ಉಗ್ರ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ