Breaking News

ಕೊಡಲಿಯಿಂದ ಹೊಡೆದು ಮಗನ ಕೊಲೆ ಮಾಡಿದ ತಂದೆ

Spread the love

ಕಾಗವಾಡ: ತಾಲ್ಲೂಕಿನ ಉಗಾರ ಬಿ.ಕೆ.

ಗ್ರಾಮದಲ್ಲಿ ಮಂಗಳವಾರ ತಂದೆ ಮಗನನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ.

ಭರತೇಶ ಉರೂಫ್‌ ಚೇತನ್‌ ಖಾಂಜೆ (30) ಕೊಲೆಯಾದ ಯುವಕ. ಜಿನ್ನಪ್ಪ ಪಾಯಪ್ಪ ಖಾಂಜೆ (64) ಕೊಲೆ ಆರೋಪಿ.

‘ಭರತೇಶ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ತಂದೆ- ತಾಯಿಯನ್ನು ಕಾಳಜಿಯಿಂದ ನೋಡಿಕೊಳ್ಳುತ್ತಿರಲಿಲ್ಲ. ಕುಡಿತದ ಚಟ ಬೆಳೆಸಿಕೊಂಡಿದ್ದ. ಮದ್ಯಕ್ಕಾಗಿ ಹಣ ಕೊಡುವಂತೆ ಪದೇ ಪದೇ ಹೆತ್ತವರೊಂದಿಗೆ ಜಗಳವಾಡುತ್ತಿದ್ದ. ಮಂಗಳವಾರ ಕೂಡ ಇದೇ ಕಾರಣಕ್ಕೆ ಜಗಳ ನಡೆದಿದ್ದು, ಆವೇಶದಲ್ಲಿ ಕೊಲೆಯಾಗಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಘಟನೆಯ ಬಳಿಕ ಆರೋಪಿ ತಾನಾಗಿಯೇ ಪೊಲೀಸರಿಗೆ ಶರಣಾಗಿದ್ದಾನೆ. ಪಿಎಸ್‌ಐ ಹಣಮಂತ ನರಳೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ