ಬೆಳಗಾವಿ: ಪಕ್ಷದ ನಾಯಕರು, ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ದರಿದ್ದೇವೆ. ಸಂತೋಷ ಜಾರಕಿಹೊಳಿ ಅವರಿಗೆ ರಾಜಕಾರಣ ಸಂಬಂಧವಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿದ್ದಾರೆ.
ಗೋಕಾಕ್ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂತೋಷ ಜಾರಕಿಹೊಳಿಗೂ ರಾಜಕಾರಣಕ್ಕೂ ಸಂಬಂಧವಿಲ್ಲ. ಅಮರನಾಥ್ ಅವರು ಮಾತ್ರ ರಾಜಕೀಯದಲ್ಲಿ ಇರಲಿದ್ದಾರ.
ಈಗಾಗಲೇ ಅಮರನಾಥ್ ಜಾರಕಿಹೊಳಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ. ಪಕ್ಷಕ್ಕಾಗಿ ಸಾಮಾನ್ಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತೆನೆ ಎಂದು ಸ್ಪಷ್ಟ ಪಡಿಸಿದ್ದಾರೆ. ಲೋಕಸಭಾ ಟಿಕೆಟ್ ಅಭ್ಯರ್ಥಿಯ ಬಗ್ಗೆ ಪಕ್ಷದ ನಾಯಕರು ಸಭೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಮಹಾರಾಷ್ಟ್ರ ರಾಜಕೀಯಕ್ಕೆ ರಮೇಶ್ ಜಾರಕಿಹೊಳಿ ಎಂಟ್ರಿ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಮಹಾರಾಷ್ಟ್ರ ರಾಜಕಾರಣದಲ್ಲಿ ಪ್ರವೇಶ ಎಂಬ ಸುದ್ದಿ ಸುಳ್ಳು. ನಾನು ವ್ಯಯಕ್ತಿ ವಿಚಾರವಾಗಿ ಮಹಾರಾಷ್ಟಕ್ಕೆ ಭೇಟಿ ನೀಡಿದ್ದೆ ಎಂದು ಹೇಳಿದರು.
ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಇದರಿಂದ ಜಿಲ್ಲಾಧಿಕಾರಿ, ಅಧಿಕಾರಿಗಳೊಂದಿಗೆ ಇಂದು ಸಭೆ ಕರೆಯಲಾಗಿದೆ. ಸಭೆಯಲ್ಲಿ ಮುಂಜಾಗ್ರತ ಕ್ರಮ ಚರ್ಚಿಸಲಾಗುತ್ತದೆ ಎಂದರು.
Laxmi News 24×7