Breaking News
Home / ರಾಜಕೀಯ / ಶಿವಮೂರ್ತಿ ಶರಣರ ಅರ್ಜಿ ವಿಚಾರಣೆ ಇಂದು

ಶಿವಮೂರ್ತಿ ಶರಣರ ಅರ್ಜಿ ವಿಚಾರಣೆ ಇಂದು

Spread the love

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿರುವ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಆದೇಶ ಪ್ರಶ್ನಿಸಿದ ರಿಟ್‌ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ

ಎಸ್‌.ದೀಕ್ಷಿತ್‌ ಅವರ ಏಕಸದಸ್ಯನ್ಯಾಯಪೀಠದ ಮುಂದೆ ಗುರುವಾರಕ್ಕೆ (ಮಾ.2) ನಿಗದಿ ಮಾಡಲಾಗಿದೆ.

ಈ ಸಂಬಂಧ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ ಎಚ್‌.ಎಂ.ವಿಶ್ವನಾಥ್‌ ಮತ್ತು ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿರುವ ರಿಟ್‌ ಅರ್ಜಿ ಸಂಖ್ಯೆ 25316/2022ರ ಮುಂದುವರಿದ ವಿಚಾರಣೆ ಮಧ್ಯಾಹ್ನ 2.30ಕ್ಕೆ ಆರಂಭವಾಗಲಿದೆ.

‘ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ-1988ರ ಕಲಂ 8 (2)ರಡಿ ಶರಣರು ತಮ್ಮ ಅಧಿಕಾರ ಚಲಾಯಿಸಲು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರ್ಬಂಧ ವಿಧಿಸಿರುವುದು ಕಾನೂನು ಬಾಹಿರ’ ಎಂಬುದು ಅರ್ಜಿದಾರರ ಆಕ್ಷೇಪ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ