ಹೊಸದಿಲ್ಲಿ: ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ರಾಜ್ಯಗಳ ಚುನಾವಣ ಫಲಿತಾಂಶ ಗುರುವಾರ ಹೊರಬೀಳಲಿದೆ.
ತ್ರಿಪುರಾ, ನಾಗಾಲ್ಯಾಂಡ್ ಬಿಜೆಪಿ ತೆಕ್ಕೆಗೆ ಹೋಗಲಿದೆ, ನಾಗಾಲ್ಯಾಂಡ್ ಅತಂತ್ರವಾಗಲಿದೆ ಎಂದು ಸಮೀಕ್ಷೆಗಳು ಹೇಳಿವೆ.
ಫೆ. 16ರಂದು ತ್ರಿಪುರಾ ಮತ್ತು ಫೆ. 27ರಂದು ನಾಗಾಲ್ಯಾಂಡ್ ಹಾಗೂ ಮೇಘಾಲಯ ವಿಧಾನಸಭೆಗಳಿಗೆ ಚುನಾವಣೆ ನಡೆದಿತ್ತು.
ತ್ರಿಪುರಾದಲ್ಲಿ ಪ್ರಾದೇಶಿಕ ಪಕ್ಷ ತಿಪ್ರ ಮೋಥಾ 42 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರೆ, ಬಿಜೆಪಿ 55 ಸ್ಥಾನಗಳಲ್ಲಿ ಸ್ಪರ್ಧಿಸಿದೆ.
ಮೇಘಾಲಯ ಹಾಗೂ ನಾಗಾಲ್ಯಾಂಡ್‌ಗಳಲ್ಲಿ ಮತಎಣಿಕೆಗೆ ಸಿದ್ಧತೆಗಳನ್ನು ಮಾಡಲಾಗಿದೆ.