Breaking News

ಬೆಳಗಾವಿಯಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣ: ರಾಜಹಂಸಗಡದತ್ತ ಹೊರಟ ಸಿಎಂ ಬೊಮ್ಮಾಯಿ

Spread the love

ಬೆಳಗಾವಿ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಸಮಾರಂಭ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜಹಂಸಗಡದತ್ತ ಸಿಎಂ ಬಸವರಾಜ ಬೊಮ್ಮಾಯಿ ಹೊರಟಿದ್ದಾರೆ.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ರಾಜಹಂಸಗಡದತ್ತ ಹೊರಟಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಗೆ , ಗೋವಿಂದ ಕಾರಜೋಳ, ರಮೇಶ್‌ ಜಾರಕಿಹೊಳಿ ಸಾಥ್‌ ನೀಡಿದ್ದಾರೆ. ಶಿವಾಜಿ ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಲಿದ್ದಾರೆ. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ ಕುಮಾರ ಪಾಲ್ಗೊಳ್ಳಲಿದ್ದಾರೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ರಮೇಶ ಜಾರಕಿಹೊಳಿ ಸೇರಿ ಜಿಲ್ಲೆಯ ಎಲ್ಲ ಸಂಸದರು, ಎಲ್ಲ ಶಾಸಕರು ಉಪಸ್ಥಿತಿರಿದ್ದಾರೆ.

ಇನ್ನು ಈ ಪ್ರತಿಮೆ ಅನಾವರಣ ಕಾರ್ಯಕ್ರಮ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ನಡುನೆ ಕಿತ್ತಾಟ ಶುರುವಾಗಿದೆ. ಲಕ್ಷ್ಮಿ ಹೆಬ್ಬಾಳಕರ ಅವರು ಮಾ.5ರಂದು ಮತ್ತೊಮ್ಮೆ ಶಿವಾಜಿ ಪ್ರತಿಮೆ ಅನಾವರಣ ಕಾರ್ಯಕ್ರಮ ಆಯೋಜಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ನೆರೆಯ ಮಹಾರಾಷ್ಟ್ರದ ಕಾಂಗ್ರೆಸ್‌ ನಾಯಕರನ್ನು ಆಹ್ವಾನಿಸಿದ್ದಾರೆ.


Spread the love

About Laxminews 24x7

Check Also

ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ…

Spread the love ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ… ಪರಿಸರ ಜಾಗೃತಿಯ ಸಂದೇಶ ಖಾನಾಪೂರ ತಾಲೂಕಿನ ಗರ್ಲಗುಂಜಿ ಗ್ರಾಮದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ