ಬೆಳಗಾವಿ: ಜಿಲ್ಲೆಯಾದ್ಯಂತ, ಕಳೆದ ನಾಲ್ಕು ದಿನಗಳಿಂದ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಯಾರೂ ಸಹಾ ಹಳ್ಳ ಅಥವಾ ನದಿಗಳನ್ನು ದಾಟುವ ಆತುರ ಮಾಡಬೇಡಿ ಎಂದು ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ.
ಗೋಕಾಕ್ ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ನದಿ ಹಳ್ಳ ತುಂಬಿ ಹರಿಯುತ್ತಿವೆ. ನದಿ ಸಮೀಪದ ಗ್ರಾಮಸ್ಥರು ಜಾನುವಾರುಗಳನ್ನು ನದಿ, ಹಳ್ಳದ ತೀರದ ಕಡೆ ಬಿಡಬೇಡಿ. ಯಾರೂ ಸಹಾ ಹಳ್ಳ ಅಥವಾ ನದಿಗಳನ್ನು ದಾಟುವ ಆತುರ ಮಾಡಬೇಡಿ ಎಂದಿದ್ದಾರೆ.
ಇನ್ನೂ ಎರಡು ದಿನಗಳ ಕಾಲ ಮಳೆ ಹೀಗೆ ಮುಂದುವರಿಯುವ ಸಾಧ್ಯತೆಯಿದ್ದು, ರೈತರು ಹಾಗೂ ಸಾರ್ವಜನಿಕರು ಆದಷ್ಟು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ.