Breaking News

ಮುರುಘಾ ಮಠದಲ್ಲಿ ಸರಣಿ ಅಪರಾಧಗಳು: ಅಡ್ವೊಕೇಟ್‌ ಜನರಲ್‌

Spread the love

ಬೆಂಗಳೂರು: ಮಠದಲ್ಲಿ ಸರಣಿ ಅಪರಾಧಗಳು ನಡೆದ ಸರಮಾಲೆಯೇ ಇದೆ ಎಂಬುದು ತನಿಖಾಧಿಕಾರಿಗಳಿಗೆ ಮೇಲ್ನೋಟಕ್ಕೆ ಕಂಡುಬಂದ ಕಾರಣಕ್ಕಾಗಿ ದೋಷಾರೋಪ ಪಟ್ಟಿಯಲ್ಲಿ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆಯನ್ನೂ ಅಡಕಗೊಳಿಸಲಾಗಿದೆ. ಹೀಗಾಗಿಯೇ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಪೀಠಾಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿದೆ…

 

ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿರುವ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಆದೇಶ ಪ್ರಶ್ನಿಸಿದ ರಿಟ್‌ ಅರ್ಜಿಯ ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ ಹೈಕೋರ್ಟ್‌ಗೆ ವಿವರಿಸಿದ್ದು ಹೀಗೆ.

ಈ ಸಂಬಂಧ ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ ಎಚ್‌.ಎಂ.ವಿಶ್ವನಾಥ್‌ ಮತ್ತು ಮಠದ ತಾತ್ಕಾಲಿಕ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಈ ಮೊದಲು ಅರ್ಜಿದಾರರ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್‌, ‘ಧಾರ್ಮಿಕ ಸಂಸ್ಥೆಗಳಲ್ಲಿ ಸರಣಿಯೋಪಾದಿಯಲ್ಲಿ ಅನೈತಿಕ ಚಟುವಟಿಕೆಗಳು ನಡೆದಿಲ್ಲ. ಒಂದು ಬಾರಿ ಮಾತ್ರವೇ ಘಟಿಸಿದೆ ಎನ್ನಲಾದ ಆರೋಪವನ್ನೇ ನೆಪವಾಗಿಟ್ಟುಕೊಂಡು, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ ಅನ್ವಯಿಸಿರುವುದು ತಪ್ಪು’ ಎಂದು ವಾದ ಮಂಡಿಸಿದ್ದರು.

ಆದರೆ, ಇದನ್ನು ಅಲ್ಲಗಳೆದ ಅಡ್ವೊಕೇಟ್‌ ಜನರಲ್‌ ನಾವದಗಿ ಅವರು, ‘ಈ ಪ್ರಕರಣದಲ್ಲಿ ಸರಣಿಯೋಪಾದಿಯಲ್ಲಿ ಅಪರಾಧಗಳು ನಡೆದಿವೆ ಎಂಬ ಕಾರಣಕ್ಕಾಗಿಯೇ ಈ ಕಾಯ್ದೆಯನ್ನೂ ತನಿಖಾಧಿಕಾರಿಗಳು ಅಡಕಗೊಳಿಸಿದ್ದಾರೆ’ ಎಂದರು.

‘ಈ ಕಾಯ್ದೆಯನ್ನು ಮಠಕ್ಕೆ ಮಾತ್ರವೇ ನಿರ್ಬಂಧ ಮಾಡಬಹುದು. ಆದರೆ, ವಿದ್ಯಾಪೀಠಕ್ಕಲ್ಲ ಎಂಬ ವಾದದಲ್ಲಿ ಹುರುಳಿಲ್ಲ. ಏಕೆಂದರೆ, ಮಠ, ವಿದ್ಯಾಪೀಠ ಮತ್ತು ಟ್ರಸ್ಟ್ ಮೂರೂ ಅವಿಭಾಜ್ಯ ಅಂಗಗಳು. ವಿದ್ಯಾಪೀಠದ ಬೈ-ಲಾ ಪ್ರಕಾರ, ಸಂಸ್ಥಾಪಕ ಅಧ್ಯಕ್ಷರು ಮತ್ತು ಅವರ ನಂತರ ಕಾಲಕಾಲಕ್ಕೆ ಬರುವ ಬೃಹನ್ಮಠದ ಜಗದ್ಗುರುಗಳೇ ಅಧ್ಯಕ್ಷರಾಗಬೇಕೆಂಬ ನಿಯಮ ಇದೆ. ಹಾಗಾಗಿ, ಪೀಠಾಧಿಪತಿಯನ್ನು ಕೇವಲ ಮಠದ ಜವಾಬ್ದಾರಿಯಿಂದ ಮಾತ್ರವೇ ದೂರವಿಡುವಂತೆ ನಿರ್ಬಂಧಕಾಜ್ಞೆ ನೀಡಿದರೆ ಅದು ಅನಾಹುತಕಾರಿ ಪರಿಣಾಮಗಳನ್ನು ಉಂಟು ಮಾಡುತ್ತದೆ’ ಎಂಬ ಆತಂಕ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ