ಹುಬ್ಬಳ್ಳಿ: ನಗರದ ಕೈಗಾರಿಕೋದ್ಯಮಿಯೊಬ್ಬರ ಮನೆಯಲ್ಲಿ ದಾಖಲಾತಿಗಳಿಲ್ಲದ ಮೂರು ಕೋಟಿ ರೂ. ಅಕ್ರಮ ಹಣ ದೊರೆತಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.
ಇಲ್ಲಿನ ಭವಾನಿ ನಗರದ ಕೀಟನಾಶಕಗಳ ಕೈಗಾರಿಕೋದ್ಯಮಿ ರಮೇಶ ಎಂಬುವರ ಮನೆಯಲ್ಲಿ ದಾಖಲಾತಿಗಳಿಲ್ಲದ ಹಣ ದೊರೆತಿದೆ.
ಸಿಸಿಬಿ ಎಸಿಪಿ ನಾರಾಯಣ ಭರಮನಿ ಹಾಗೂ ಅಶೋಕ ನಗರ ಠಾಣೆ ಇನ್ಸಪೆಕ್ಟರ್ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ಉದ್ಯಮಿ ಮನೆ ಮೇಲೆ ದಾಳಿ ಮಾಡಿ ಹಣ ಪತ್ತೆ ಮಾಡಿದ್ದಾರೆ. ಈ ಬಗ್ಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ತನಿಖೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.
ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7