ಮುಂಬೈ: ಡ್ರಗ್ಸ್ ಪ್ರಕರಣ ಸಂಬಂಧ ಬಾಲಿವುಡ್ ನಟ ವಿವೇಕ್ ಓಬೇರಾಯ್ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಸ್ಯಾಂಡಲ್ ವುಡೇ ಡ್ರಗ್ಸ್ ಪ್ರಕರಣದಲ್ಲಿ ಎ-6 ಆರೋಪಿಯಾಗಿರುವ ಆದಿತ್ಯ ಆಳ್ವಾ ನಾಪತ್ತೆಯಾಗಿದ್ದು, ಆತನನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರು ಹುಡುಕಾಟ ನಡೆಸಿದ್ದರೆ. ಆದಿತ್ಯ ಆಳ್ವಾ, ನಟ ವಿವೇಕ ಅವರ ಸಂಬಂಧಿಯಾಗಿದ್ದು, ಅವರ ಮನೆಯಲ್ಲಿ ಇರುವ ಶಂಕೆ ವ್ಯಕ್ತವಾದ ಹಿನ್ನೆಲೆ ದಾಳಿ ನಡೆಸಿದ್ದಾರೆ.
ಇದೇ ಕಾರಣದಿಂದ ಬೆಂಗಳೂರಿನ ಸಿಸಿಬಿ ಪೊಲೀಸರು ಸರ್ಚ್ ವಾರೆಂಟ್ ನೊಂದಿಗೆ ಬಾಲಿವುಡ್ ನಟ ವಿವೇಕ್ ಓಬೆರಾಯ್ ಅವರ ಮುಂಬೈನ ಜುಹು ಪ್ರದೇಶದಲ್ಲಿರುವಂತ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ನಟ ವಿವೇಕ್ ಓಬೆರಾಯ್ ನಿವಾಸದಲ್ಲಿ ಅಡಗಿ ಕುಳಿತಿದ್ದಾನಾ ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯ ಆಳ್ವಾ ಎನ್ನುವ ಕುರಿತಂತೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭಿಸಬೇಕಿದೆ.