ದಾವಣಗೆರೆ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ದಾಳಿ ಮಾಡಿಸಿದ್ದು, ಸಂಸದ ಜಿ.ಎಂ.ಸಿದ್ದೇಶ್ವರ್ ಎಂದು ಹೇಳಿದ್ದಾರೆ.
ಜಿ.ಎಂ.ಸಿದ್ದೇಶ್ವರ್ ಅವರೇ ದಾಳಿ ಮಾಡಿಸಿದ್ದು ಎಂದು ನಮ್ಮ ಪಕ್ಷದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಇಷ್ಟಕ್ಕೂ ಅವರ ಪಕ್ಷದ ವ್ಯವಹಾರ ನಮಗೆ ಯಾಕೆ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಇದರ ಬೆನ್ನಲ್ಲೇ ಅವರ ಕಚೇರಿ, ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ 8 ಕೋಟಿಗೂ ಅಧಿಕ ನಗದು ಹಣ ಜಪ್ತಿ ಮಾಡಿದ್ದರು
Laxmi News 24×7