Breaking News

ಮುಂದಿನ ಶೈಕ್ಷಣಿಕ ವರ್ಷ ಶಾಲಾರಂಭ ದಿನವೇ ಸಮವಸ್ತ್ರ, ಪಠ್ಯಪುಸ್ತಕ ವಿತರಣೆ:

Spread the love

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು,ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಾಲೆ ಆರಂಭದ ದಿನವೇ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ ತಲುಪಿಸಲು ಸಿದ್ಧತೆ ನಡೆಸಿದೆ.

ಹೌದು, ಕಳೆದ ವರ್ಷ ಸಮವಸ್ತ್ರ ಹಾಗೂ ಪಠ್ಯಪುಸ್ತಕವನ್ನು ಸಕಾಲಕ್ಕೆ ಪೂರೈಸದೇ ಟೀಕೆ ಎದುರಿಸಿದ್ದ ಶಿಕ್ಷಣ ಇಲಾಖೆ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಾಲೆ ಆರಂಭದ ದಿನವೇ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ ವಿತರಿಸಲು ಮುಂದಾಗಿದೆ. 1 ರಿಂದ 10 ನೇ ತರಗತಿ ವಿದ್ಯರ್ಥಿಗಳಿಗೆ ಪೂರೈಸಬೇಕಿರುವ ಪಠ್ಯಪುಸ್ತಕದಲ್ಲಿ ಶೇ. 60 ಕ್ಕೂ ಹೆಚ್ಚು ಪುಸ್ತಕಗಳು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯ ಗೋದಾಮುಗಳಲ್ಲಿ ದಾಸ್ತಾನು ಮಾಡಲಾಗಿದೆ.

ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಮಕ್ಕಳಿಗೆ ಮೊದಲ ಜೊತೆ ಸಮವಸ್ತ್ರ ನೀಡಲು ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿದೆ. ಹೀಗಾಗಿ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಆರಂಭದ ದಿನವೇ ಸಮವಸ್ತ್ರ ಸಿಗಲಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ