ಹುಬ್ಬಳ್ಳಿ: ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಮದ್ದೂರು ಮತ್ತು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ.
ಅಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆ ನೆರವೇರಿಸಿದ ಬಳಿಕ ಅಲ್ಲಿಯೇ ಸಮೀಪದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳುವರು.
ನಂತರ 2.40ಕ್ಕೆ ಮೋದಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. 3.15ಕ್ಕೆ ಧಾರವಾಡದ ಐಐಟಿ ಪಕ್ಕದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಪ್ರಧಾನಿ ಆಗಮನವನ್ನು ಅವರ ಕಚೇರಿ ಖಚಿತಪಡಿಸಿದೆ’ ಎಂದು ಭಾನುವಾರ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸುದ್ದಿಗಾರರಿಗೆ ತಿಳಿಸಿದರು.
‘ಬೆಳಗಾವಿಗಿಂತ ದೊಡ್ಡಮಟ್ಟದಲ್ಲಿ ಧಾರವಾಡದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ’ ಎಂದರು
Laxmi News 24×7