ಮೈಸೂರು: ನಾನು ಲೋಕಾಯುಕ್ತ ಬಂದ್ ಮಾಡಿಲ್ಲ. ನಾನು ಲೋಕಾಯುಕ್ತ ಬಂದ್ ಮಾಡಿದ್ದರೆ ಇವತ್ತೇ ರಾಜೀನಾಮೆ ಕೊಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಾವು ಲೋಕಾಯುಕ್ತದ ಯಾವ ಅಧಿಕಾರವನ್ನೂ ಕಿತ್ತುಕೊಂಡಿಲ್ಲ. ನಮ್ಮ ಕಾಲದಲ್ಲೂ ಲೋಕಾಯುಕ್ತ ಇದ್ದರು. ಎಲ್ಲಾ ಸತ್ಯ ಗೊತ್ತಿದ್ದರು ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆ. ಎಸಿಬಿ ರದ್ದು ಮಾಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಎಸಿಬಿ ರದ್ದು ಮಾಡಿದ್ದು ಬಿಜೆಪಿ ಸರ್ಕಾರವಲ್ಲ. ನ್ಯಾಯಾಲಯ ಎಸಿಬಿ ರದ್ದು ಮಾಡಿದ್ದು. ಬಿಜೆಪಿಯವರಿಗೆ ಸುಳ್ಳು ಹೇಳುವುದು ಚಟ. ಸುಳ್ಳೆ ಬಿಜೆಪಿ ಮನೆದೇವ್ರು. ಹೀಗಾಗಿ ಲೋಕಾಯುಕ್ತ ವಿಚಾರದಲ್ಲ