26ರಂದು ದೇವೇಗೌಡ ರೋಡ್‌ ಶೋ: H,D,K,

Spread the love

ಬೆಂಗಳೂರು: ಜೆಡಿಎಸ್‌ ಹಮ್ಮಿಕೊಂಡಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಮಾರ್ಚ್‌ 26ರಂದು ನಡೆಯಲಿದ್ದು, ಆ ದಿನ ಕುಂಬಳಗೋಡಿನಿಂದ ಆರಂಭವಾಗುವ ರೋಡ್‌ಶೋದಲ್ಲಿ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಭಾಗವಹಿಸಲಿದ್ದಾರೆ.

ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್‌ ಗೌಡ ಅವರು ನಗರದಲ್ಲಿ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಕ್ಷೇತ್ರದ ನಿವಾಸಿಗಳ ಸಭೆಯಲ್ಲಿ ಮಾತನಾಡಿದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.

ಕುಮಾರಸ್ವಾಮಿ ಈ ವಿಷಯ ತಿಳಿಸಿದರು.

‘ಮಂಡ್ಯ ಮತ್ತು ಮೈಸೂರು ನಡುವಿನ ಸ್ಥಳವೊಂದರಲ್ಲಿ ಯಾತ್ರೆಯ ಸಮಾರೋಪ ನಡೆಯಲಿದೆ. ಸಮಾರೋಪದ ಸ್ಥಳದವರೆಗೂ ರೋಡ್‌ ಶೋ ನಡೆಸಲಿರುವ ದೇವೇಗೌಡರು, ಪಕ್ಷಕ್ಕೆ ಶಕ್ತಿ ತುಂಬಲಿದ್ದಾರೆ’ ಎಂದರು.

ಮಂಡ್ಯ ಜಿಲ್ಲೆಯು ಜೆಡಿಎಸ್‌ನ ಭದ್ರ ನೆಲೆ. ಅದನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಅಮಿತ್‌ ಶಾ ಅವರಿಗೆ ಮಂಡ್ಯದ ಬಗ್ಗೆ ಏನು ಗೊತ್ತು? ಸಚಿವ ಅಶ್ವತ್ಥ ನಾರಾಯಣ ಅವರು ಆ ಜಿಲ್ಲೆಯ ಬಗ್ಗೆ ಏನು ತಿಳಿದುಕೊಂಡಿದ್ದಾರೆ ಎಂದು ಪ್ರಶ್ನಿಸಿದರು.

ಸಚಿವರಿಗೆ ತಲುಪಬೇಕಿದ್ದ ಹಣ: ‘ಜೆಡಿಎಸ್‌ಗೆ ಅಧಿಕಾರ ನೀಡಿದರೆ ರಾಜ್ಯವು ದೇವೇಗೌಡರ ಕುಟುಂಬದ ಎಟಿಎಂ ಆಗುತ್ತದೆ ಎಂದು ಅಮಿತ್‌ ಶಾ ಹೇಳಿದ್ದರು. ಈಗ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಮನೆಯಲ್ಲಿ ಕೋಟಿಗಟ್ಟಲೆ ಹಣ ಸಿಕ್ಕಿದೆ. ಅದರಲ್ಲಿ ಸ್ವಲ್ಪ ಹಣ ಬಿಜೆಪಿ ಸಚಿವರೊಬ್ಬರಿಗೆ ತಲುಪಬೇಕಿತ್ತು’ ಎಂದರು.


Spread the love

About Laxminews 24x7

Check Also

ಅಮೇರಿಕಾರದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ 260 ಕೋಟಿ ಪರಿಹಾರ!

Spread the loveಸಿಯಾಟಲ್: ಅಮೆರಿಕದ ಸಿಯಾಟಲ್‌ನಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ