Breaking News

ಹಬ್ಬಕ್ಕೆಂದು ಅಕ್ಕನ ಮನೆಗೆ ಬಂದಿದ್ದ ಗೃಹಿಣಿ ದುರಂತ ಅಂತ್ಯ: ಭಗ್ನ ಪ್ರೇಮಿಯಿಂದಲೇ ಘೋರ ಕೃತ್ಯ

Spread the love

ವಿಜಯನಗರ: ಹಬ್ಬಕ್ಕೆಂದು ಸಂಬಂಧಿಕರ ಮನೆಗೆ ಬಂದಿದ್ದ ಗೃಹಿಣಿಯನ್ನು ಮಾಜಿ ಪ್ರಿಯಕರನೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ನಡೆದಿದೆ.

ಪ್ರತಿಭಾ (27) ಕೊಲೆಯಾದ ಮೃತ ದುರ್ದೈವಿ. ಚಿರಸ್ತಹಳ್ಳಿ ಮೂಕಪ್ಪನವರ ಹನುಮಂತಪ್ಪ ಕೊಲೆ ಆರೋಪಿ.

ರಾಣೆಬೆನ್ನೂರಿನ ಪ್ರತಿಭಾ ತನ್ನ ಪುತ್ರನೊಂದಿಗೆ ದುಗ್ಗಾವತಿ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದಳು. ಈ ವೇಳೆ ಪ್ರತಿಭಾ ಮೇಲೆ ಹನುಮಂತ ಏಕಾಏಕಿ ದಾಳಿ ಮಾಡಿ ಕೊಲೆ ಮಾಡಿದ್ದಾನೆ.

 

ಹತ್ಯೆಯ ಬಳಿಕ ಪರಾರಿ ಆಗಿದ್ದ ಹನುಮಂತಪ್ಪನನ್ನು ತಾಲೂಕಿನ ನೀಲಗುಂದ ಕ್ರಾಸ್ ಬಳಿ ಬಂಧಿಸಲಾಗಿದೆ. ಪ್ರತಿಭಾಳನ್ನು ನಾನು ಪ್ರೀತಿಸುತ್ತಿದ್ದೆ ಅಂತ ಹನುಮಂತಪ್ಪ ಹೇಳಿಕೊಂಡು ತಿರುಗಾಡುತ್ತಿದ್ದ. ಆದರೆ, ಬೇರೆ ಹುಡುಗನೊಂದಿಗೆ ಪ್ರತಿಭಾಗೆ ಮದುವೆ ಆಗಿತ್ತು. ಇದರಿಂದ ಕೊಪಗೊಂಡು ಊರಿಗೆ ಬಂದಾಗ ಕೃತ್ಯ ಎಸಗಿದ್ದಾನೆಂದು ಮಾಹಿತಿ ತಿಳಿದುಬಂದಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ