Breaking News

ರಾಜ್ಯದ ಪಶುಪಾಲಕರಿಗೆ ಪ್ರತಿ ದಿನ 11 ಕೋಟಿ ರೂ. ಕೈತಪ್ಪಿ ಹೋಗುತ್ತಿದೆ : ಸಿದ್ದರಾಮಯ್ಯ

Spread the love

ಬೆಂಗಳೂರು : ರಾಜ್ಯದ ಹಾಲು ಉತ್ಪಾದಕ ರೈತರು ಹಾಗೂ ಗ್ರಾಹಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಭ್ರಷ್ಟ ಬಿಜೆಪಿಯೆ ನೇರ ಕಾರಣ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು,ರಾಜ್ಯದ ಪ್ರಮುಖ ದಿನ ಪತ್ರಿಕೆಗಳು ಇಂದು ಹಾಲು ಮತ್ತು ಹಾಲಿನ ಉತ್ಪನ್ನಗಳ ಕುರಿತಂತೆ ಅತ್ಯಂತ ಆತಂಕಕಾರಿಯಾದ ವರದಿಗಳನ್ನು ಪ್ರಕಟಿಸಿವೆ.

ಈ ಮಾರ್ಚ್‍ನಲ್ಲಿ ಪ್ರತಿ ದಿನ 99 ಲಕ್ಷ ಲೀಟರುಗಳಷ್ಟು ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರುಗಳಷ್ಟು ಹಾಲನ್ನು ಮಾತ್ರ ಕೆಎಂಎಫ್ ಸಂಗ್ರಹಿಸುತ್ತಿದೆ. ಇದೂ ಕೂಡ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಪ್ರಸ್ತುತ ಪ್ರತಿ ದಿನ ಸುಮಾರು 28 ಲಕ್ಷ ಲೀಟರುಗಳಷ್ಟು ಹಾಲಿನ ಉತ್ಪಾದನೆ ಕಡಿಮೆಯಾಗಿದೆ. ಇದರಿಂದಾಗಿ ರಾಜ್ಯದ ಪಶುಪಾಲಕರಿಗೆ ಪ್ರತಿ ದಿನ ಸುಮಾರು 11 ಕೋಟಿ ರೂಪಾಯಿಗಳಷ್ಟು ಹಣ ಕೈತಪ್ಪಿ ಹೋಗುತ್ತಿದೆ. ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಸಂಸಾರಗಳನ್ನು ನಡೆಸಲು ಹೈನುಗಾರಿಕೆ ಒಂದು ಪ್ರಮುಖ ಸಾಧನವಾಗಿತ್ತು. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಮತ್ತು ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರಗಳ ಹಾದಿ ತಪ್ಪಿದ ಅಡ್ಡ ಕಸುಬಿ ನೀತಿಗಳೆ ಇದಕ್ಕೆ ಕಾರಣವಲ್ಲವೆ ಎಂದು ಪ್ರಶ್ನೆ ಮುಂದಿಟ್ಟಿದ್ದಾರೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ