ಯಾದಗಿರಿ: ಕಾಂಗ್ರೆಸ್‌ನವರು ನೀಡುತ್ತಿರುವ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್‌ನವರು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರು ಹೇಳಿಕೊಳ್ಳುವುದಕ್ಕೆ ನಾನೇನು ಟೀಕೆ ಮಾಡುವುದಿಲ್ಲ ಎಂದರು.
ವಿಜಯಸಂಕಲ್ಪ ಯಾತ್ರೆಯಲ್ಲಿ ಸೇರುವ ಜನರು ನೋಡಿದರೆ ವಿಜಯೋತ್ಸವ ಆಚರಣೆಗೆ ಬರುತ್ತಿದ್ದಾರೆ ಎಂದು ಭಾಸವಾಗುತ್ತದೆ. ಬಿಜೆಪಿಯೇ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದರು.
ವಸತಿ ಸಚಿವ ವಿ.ಸೋಮಣ್ಣ ಅವರು ಕಾಂಗ್ರೆಸ್ ಸೇರುತ್ತಾರೆ ಎನ್ನುವುದಕ್ಕೆ ಯಾವುದೇ ಸತ್ಯಾಂಶ ಇಲ್ಲ. ಯಾರು ಕೂಡ ಬಿಜೆಪಿಯನ್ನು ಬಿಡುವುದಿಲ್ಲ ಎಂದರು.