Breaking News

ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಕ್ರಿಕೆಟ್ ಆಟಗಾರರೊಬ್ಬರನ್ನು ಸಿಸಿಬಿ ಪೊಲೀಸರು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದ್ದಾರೆ.

Spread the love

ಬೆಂಗಳೂರು,ಅ.15- ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಕ್ರಿಕೆಟ್ ಆಟಗಾರರೊಬ್ಬರನ್ನು ಸಿಸಿಬಿ ಪೊಲೀಸರು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದ್ದಾರೆ.

ಈ ಆಟಗಾರ ಈಗಾಗಲೇ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಆಪ್ತ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ತನಿಖಾ ಅಧಿಕಾರಿಗಳು ಅವರನ್ನು ವಿಚಾರಣೆ ಗೊಳಪಡಿಸಲಿದ್ದಾರೆ. ಈಗಾಗಲೇ ಕೆಪಿಎಲ್ ಕ್ರಿಕೆಟ್ ತಂಡದ ಮಾಲೀಕ ಹಾಗೂ ಉದ್ಯಮಿಯೊಬ್ಬರನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸಿ ದ್ದಾರೆ ಎಂದು ತಿಳಿದುಬಂದಿದೆ.

ಅವರಿಂದ ಎರಡು ಮೊಬೈಲ್‍ಗಳನ್ನು ವಶಪಡಿಸಿಕೊಂಡಿರುವ ತನಿಖಾಕಾರಿಗಳು ಅವುಗಳನ್ನು ವಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.ಕೆಪಿಎಲ್ ಕ್ರಿಕೆಟ್ ತಂಡದ ಮಾಲೀಕ ಮತ್ತು ಆಟಗಾರ ಈ ಇಬ್ಬರು ಕ್ರಿಕೆಟ್ ಪಂದ್ಯಾವಳಿ ಮುಗಿದ ನಂತರ ಮಾರತಹಳ್ಳಿಯಲ್ಲಿರುವ ಪ್ರತಿಷ್ಠಿತ ಕ್ಲಬ್‍ಗೆ ಹೋಗಿ ನಟಿಯೊಬ್ಬರೊಂದಿಗೆ ಪಾರ್ಟಿ ಮಾಡಿದ್ದಾರೆ ಎಂದು ಸಿಸಿಬಿ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ