Breaking News

ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಕರೆ ಹಿಂಪಡೆದ ಕಾಂಗ್ರೆಸ್

Spread the love

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

‘ಬಿಜೆಪಿ ಸರ್ಕಾರದ ಮಿತಿಮೀರಿದ ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮಾ.9 ರ ಬೆಳಗ್ಗೆ 9 ಗಂಟೆಯಿಂದ 11 ರವರೆಗೆ ಎರಡು ಗಂಟೆಗಳ ಕಾಲ ಸಾಂಕೇತಿಕ ಬಂದ್ ಮಾಡಲು ಕಾಂಗ್ರೆಸ್ ನಿರ್ಧರಿಸಿತ್ತು.

ಆದರೆ ಪರೀಕ್ಷೆಗಳು ಇರುವ ಕಾರಣ ಬಂದ್ ನಿಂದ ನಮಗೆ ತೊಂದರೆಯಾಗಲಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅವರ ಹಿತ ನಮ್ಮ ಆದ್ಯತೆ. ಹೀಗಾಗಿ ಅವರ ಅಭಿಪ್ರಾಯಕ್ಕೆ ಗೌರವ ನೀಡಿ ಬಂದ್ ಕರೆ ವಾಪಸ್ ಪಡೆಯಲು ತೀರ್ಮಾನಿಸಿದ್ದೇವೆ’ ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬರ ಪರಿಸ್ಥಿತಿ ಸಮರ್ಪಕವಾಗಿ ನಿಭಾಯಿಸಲು ನೋಡಲ್ ಅಧಿಕಾರಗಳನ್ನು ನಿಯೋಜಿಸಿ – ಡಿಸಿಗೆ ಹೆಚ್.ಸಿ ಬಾಲಕೃಷ್ಣ ಸೂಚನೆ

Spread the loveರಾಮನಗರ: ಜಿಲ್ಲೆಯ ಐದು ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿದ್ದು, ಬರ  ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಎಲ್ಲಾ ತಾಲೂಕುಗಳಲ್ಲೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ