Breaking News
Home / ರಾಜಕೀಯ / ನಾಳೆಯಿಂದ 29ರವರೆಗೆ ದ್ವಿತೀಯ ಪಿಯು ಪರೀಕ್ಷೆ; ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ್ದವರ ಮೇಲೆ ನಿಗಾ

ನಾಳೆಯಿಂದ 29ರವರೆಗೆ ದ್ವಿತೀಯ ಪಿಯು ಪರೀಕ್ಷೆ; ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ್ದವರ ಮೇಲೆ ನಿಗಾ

Spread the love

ಬೆಂಗಳೂರು: 2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ನಾಳೆ (ಮಾ.9) ಆರಂಭವಾಗಲಿದ್ದು ರಾಜ್ಯಾದ್ಯಂತ 1,109 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಮಾ. 29ರ ವರೆಗೂ ನಡೆಯಲಿರುವ ಈ ಪರೀಕ್ಷೆಗೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮರಾ ಹಾಗೂ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

 

3,63,698 ಬಾಲಕರು ಮತ್ತು 3,62.497 ಬಾಲಕಿಯರು ಸೇರಿ ಒಟ್ಟಾರೆ 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಹೊಸದಾಗಿ 6.29 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 25,847 ಖಾಸಗಿ ಮತ್ತು 70,589 ಪುನರಾವರ್ತಿತ ವಿದ್ಯಾರ್ಥಿಗಳು. ಕಲಾ ನಿಕಾಯದಿಂದ 2,34,815, ವಾಣಿಜ್ಯ- 2,47,260 ಮತ್ತು ವಿಜ್ಞಾನದಿಂದ 2,44,120 ವಿದ್ಯಾರ್ಥಿಗಳಿದ್ದಾರೆ.

 

ಪರೀಕ್ಷಾ ಸಿದ್ಧತೆಗಳ ಕುರಿತು ಬುಧವಾರ ವಿಧಾನಸೌಧದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಮಾತನಾಡಿ, ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಭದ್ರತೆಗೂ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. 5,716 ಕಾಲೇಜುಗಳ 1,109 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 1,109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ, 525 ತಾಲ್ಲೂಕು ಜಾಗೃತ ದಳ ಮತ್ತು 2,373 ವಿಶೇಷ ಜಾಗೃತ ದಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಹಾಗೂ ಮಂಡಳಿಯ ಕೇಂದ್ರ ಕಚೇರಿಯಲ್ಲಿ 24/7 ಸಿಸಿಟಿವಿ ನಿಗಾ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

 

ಪರೀಕ್ಷಾ ಆಕ್ರಮಗಳಲ್ಲಿ ಭಾಗಿಯಾಗಿದ್ದವರ ಮೇಲೆ ಸೂಕ್ತ ನಿಗಾ ವಹಿಸಲಾಗಿದೆ. ಟ್ಯೂಷನ್, ಕೋಚಿಂಗ್ ಕೇಂದ್ರಗಳು, ಝೆರಾಕ್ಸ್ ಕೇಂದ್ರಗಳು, ಸೈಬರ್ ಕೇಂದ್ರ, ಕಂಪ್ಯೂಟರ್ ಕೇಂದ್ರ ಹಾಗೂ ಗೇಮ್ಸ್ ಕೇಂದ್ರಗಳ ಮೇಲೆ ಗಮನ ಹರಿಸಲಾಗಿದೆ. ಪರೀಕ್ಷೆ ಕುರಿತು ಸಾಮಾಜಿಕ ತಾಣಗಳಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರಲ್ಲಿ ವದಂತಿ, ಗೊಂದಲ ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಭದ್ರತಾ ಕೊಠಡಿಗಳ ಬಳಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದರು.

ನಾಳೆ ಕನ್ನಡ ಪರೀಕ್ಷೆ: ಮಾ.9ರಿಂದ 29ರ ವರೆಗೆ ಪರೀಕ್ಷೆ ನಡೆಯಲಿದೆ. ಪ್ರತಿದಿನ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿದೆ. ಗುರುವಾರ ಪ್ರಥಮ ಭಾಷೆ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆಗಳು ನಡೆಯಲಿವೆ.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ