Breaking News

ವಿಧಾನಸಭೆ ಚುನಾವಣೆ: ಕಾಂಗ್ರೆಸ್‌ನ 120 ಕ್ಷೇತ್ರಗಳ ಪಟ್ಟಿ 20ರೊಳಗೆ ಪ್ರಕಟ?

Spread the love

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ 120 ಕ್ಷೇತ್ರಗಳಿಗೆ ಇದೇ 20ರ ಒಳಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲು ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ. ಎರಡು ದಿನಗಳಿಂದ ನಡೆಯುತ್ತಿರುವ ಸ್ಕ್ರೀನಿಂಗ್‌ ಸಮಿತಿ ಸಭೆಯಲ್ಲಿ ಈ ಕ್ಷೇತ್ರಗಳಿಗೆ ಸಂಭವನೀಯ ಒಬ್ಬ ಅಭ್ಯರ್ಥಿಯ ಹೆಸರು ಅಂತಿಮಗೊಳಿಸಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

 

70 ಕ್ಷೇತ್ರಗಳಿಗೆ ಎರಡು-ಮೂರು ಅಭ್ಯರ್ಥಿಗಳಿದ್ದಾರೆ. ಆ ಕ್ಷೇತ್ರಗಳಿಗೂ ಸಂಭವನೀಯ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಸಮಿತಿಯು ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಪಕ್ಷದ ವರಿಷ್ಠರಿಗೆ ನೀಡಲಿದೆ. ಪಟ್ಟಿಗೆ ಕೇಂದ್ರ ಚುನಾವಣಾ ಸಮಿತಿ ಅಂತಿಮ ಮುದ್ರೆ ಒತ್ತಲಿದೆ. ಆದರೆ, ಕೇಂದ್ರ ಚುನಾವಣಾ ಸಮಿತಿ ಇನ್ನೂ ರಚನೆ ಆಗಿಲ್ಲ. ಸದ್ಯದಲ್ಲೇ ಈ ಸಮಿತಿ ರಚನೆಯಾಗಲಿದೆ ಎಂದೂ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ