Breaking News

1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ 6 ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಉದ್ಘಾಟಿಸಿದ ಸತೀಶ್‌ ಜಾರಕಿಹೊಳಿ

Spread the love

ಬೆಳಗಾವಿ: ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ. ಕಾರಣ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಹೆಚ್ಚಿನ ಗಮನ ನೀಡಬೇಕು. ನಿಮಗೆ ಬೇಕಾದ ಸಹಾಯ, ಸಹಕಾರ ನೀಡಲು ನಾನು ಸದಾ ಬದ್ಧನಿದ್ದೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.

ಯಮಕನಮರಡಿ ಮತಕ್ಷೇತ್ರದ ಮುಚ್ಚಂಡಿ ಗ್ರಾಮದಲ್ಲಿ ಸರ್ಕಾರಿ ಮಾದರಿ ಕನ್ನಡ ಶಾಲೆ ಸನ್ 2022 – 23 ರಲ್ಲಿ ” 4059″ ಕಟ್ಟಡಗಳ ಯೋಜನೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ 6 ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡುವ ಗುರಿ ಹೊಂದಬೇಕು. ಉನ್ನತ ಹುದ್ದೆಗಳ ಗುರಿಯೊಂದಿಗೆ ವ್ಯಾಸಂಗ ಮಾಡಬೇಕು. ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದರೆ ಮಾತ್ರ ಯಾವುದೇ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಸಾಧ್ಯ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣದ ಬಗ್ಗೆ ವಿದ್ಯಾರ್ಥಿಗಳು ಗಮನಹರಿಸಬೇಕೆಂದು ತಿಳಿಸಿದರು.

ಈ ನೂತನ ಶಾಲಾ ಕೊಠಡಿಗಳಿಂದ ಮುಂದಿನ ಹತ್ತು ವರ್ಷಗಳ ಅವಧಿಗೆ ವಿದ್ಯಾರ್ಥಿಗಳಿಗೆ ಕೊಠಡಿಗಳ ಕೊರತೆ ಆಗಲ್ಲ. ಮತಕ್ಷೇತ್ರದಲ್ಲಿ ಕಳೆದ 15 ವರ್ಷದ ಶ್ರಮದಿಂದ ರಸ್ತೆಗಳ ಸುಧಾರಣೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ಮೂಲ ಸೌಕರ್ಯಗಳು ಜನರಿಗೆ ದೊರೆತಿವೆ. ನಿಮ್ಮ ಸಹಕಾರ ಸಿಕ್ಕಿದ್ದರಿಂದ ಯಮಕನಮರಡಿ ಮಾದರಿ ಕ್ಷೇತ್ರವನ್ನಾಗಿ ನಿರ್ಮಿಸಲು ಸಾಧ್ಯವಾಗಿದೆ ಎಂದರು.

ನನ್ನ ಮೊದಲ ಆದ್ಯತೆ ಶಿಕ್ಷಣಕ್ಕೆ, ಹೀಗಾಗಿ ಕಳೆದ 30 ವರ್ಷದ ಹಿಂದೆಯೇ ಎನ್‌ಎಸ್‌ಎಫ್‌ ಸ್ಕೂಲ್‌ ಪ್ರಾರಂಭಿಸಿ, 3 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಿದ್ದೇನೆ. ನಂತರ ಶಾಸಕನಾದ ಮೇಲು ಶೈಕ್ಷಣಿಕ ಕಾಂತ್ರಿಗೆ ಪ್ರಾಮುಖ್ಯತೆ ನೀಡುತ್ತಿದ್ದೇನೆ. 224 ಮತಕ್ಷೇತ್ರದಲ್ಲಿ ಶಿಕ್ಷಣಕ್ಕೆ ನಾನು ನೀಡಿದ ಆದ್ಯತೆ ಯಾವ ಶಾಸಕರು ನೀಡಿಲ್ಲ. ಇದಕ್ಕೆ ಉದಾಹರಣೆ ಯಮಕನಮರಡಿ ಕ್ಷೇತ್ರದ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳಿಗೆ 5 ಸಾವಿರ ಡೆಸ್ಕ್‌ ಗಳನ್ನು ವಿತರಿಸಿದ್ದೇನೆ ಎಂದು ಹೇಳಿದರು.

ರಾಜಕೀಯ ಭಾಷಣದಿಂದ ಅಭಿವೃದ್ಧಿ ಸಾಧ್ಯವಿಲ್ಲ. ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಸರ್ಕಾರಿ ಆಸ್ಪತ್ರೆಗಳು ಜನತೆಗೆ ಗುಣಮಟ್ಟದ ಸೇವೆ ನೀಡಬೇಕು. ಎಲ್ಲಾ ಮಕ್ಕಳಿಗೆ ಖಾಸಗಿ ಶಾಲೆಯಲ್ಲಿ ಕಲಿಯಲು ಶಕ್ತಿ ಇರಲ್ಲ. ಇವೆಲ್ಲವೂ ದೊರೆಯಬೇಕಾದರೆ ನಾವು ಎಚ್ಚಗೊಳ್ಳಬೇಕು. ಗುಣಮಟ್ಟದ ಶಿಕ್ಷಣ ಸಿಕ್ಕಾಗ ಮಕ್ಕಳ ಭವಿಷ್ಯ ಉಜ್ವಲವಾಗಲು ಸಾಧ್ಯವಿದೆ. ಶಿಕ್ಷಣ ಕ್ಷೇತ್ರ ಸುಧಾರಣೆ ಆಗಲು ಹೋರಾಟ ನಡೆಸಬೇಕು. ಆದರೆ ಇವತ್ತು ಗುಡಿಗಳನ್ನು ಕಟ್ಟದಿದ್ದರೆ ವೋಟ್ ಹಾಕಲ್ಲ ಎನ್ನುವ ಕೂಗು ಕೇಳುತ್ತದೆ. ಇಂತಹ ವ್ಯವಸ್ಥೆ ಸರಿಯಲ್ಲ ಎಂದು ತಿಳಿಸಿದರು.

ಒಳ್ಳೆಯ ಕೆಲಸ ಮಾಡಿದವರನ್ನು ಆಯ್ಕೆ ಮಾಡಿ. ಮಾಜಿ ಸಿಎಂ ಬಂಗಾರಪ್ಪ ಅವರು ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗದೆ ಆಯ್ಕೆಯಾಗುತ್ತಿದ್ದರು. ಅವರ ಶಿಷ್ಯನಾದ ನಾನು ಅವರಂತೆ ಆಯ್ಕೆಯಾಗಬೇಕೆಂದು ಹಠ ಇತ್ತು. ಹೀಗಾಗಿ ಕಳೆದ ಬಾರಿ ಮತಕ್ಷೇತ್ರದಲ್ಲಿ ಪ್ರಚಾರ ಮಾಡದೇ ಆಯ್ಕೆಯಾದೆ. ನನ್ನನ್ನು ಆಯ್ಕೆ ಮಾಡಿದ ನಿಮ್ಮೆಲ್ಲರಿಗೂ ನಾನು ಚಿರಋಣಿಯಾಗಿದ್ದೇನೆ. ಅಭಿವೃದ್ಧಿಗೆ ಹೆಚ್ಚು ಓತ್ತು ನೀಡುವ ನನ್ನನ್ನು ಮುಂದೆಯೂ ಬೆಂಬಲಿಸುತ್ತೀರಿ ಎಂಬ ನಂಬಿಕೆ ನನಗೆದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ