ರಾಯಚೂರು: ಆರ್ಥಿಕ ಇಲಾಖೆ ಮತ್ತು ಮುಖ್ಯಮಂತ್ರಿಯೊಂದಿಗೆ ಸಮಾಲೋಚಿಸಿ ಸಾರಿಗೆ ನೌಕರರ ವೇತನವನ್ನು ಶೇ 10 ರಷ್ಟು ಹೆಚ್ಚಿಸಲು ಕ್ರಮ ವಹಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ನೌಕರರ ಸಂಘದೊಂದಿಗೆ ಮಾತುಕತೆ ನಡೆಸಿದ್ದು, ಶೀಘ್ರದಲ್ಲೆ ಸಿಹಿ ಸುದ್ದಿ ನೀಡಲಾಗುವುದು ಎಂದರು.
ಬೆಂಗಳೂರಿನಲ್ಲಿ ಸಜೀವವಾಗಿ ದಹನವಾಗಿರುವ ಬಸ್ ಚಾಲಕನ ಕುಟುಂಬಕ್ಕೆ ತಕ್ಷಣ ₹5 ಲಕ್ಷ ಪರಿಹಾರ ನೀಡಬೇಕು, ವಿಮಾ ಪರಿಹಾರ
ಒದಗಿಸಬೇಕು ಹಾಗೂ ಕುಟುಂಬದವರೊಬ್ಬರಿಗೆ ಉದ್ಯೋಗ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಘಟನೆ ನಡೆಯುವುದಕ್ಕೆ ಕಾರಣ ಪತ್ತೆ ಹಚ್ಚಲು ತಿಳಿಸಲಾಗಿದೆ ಎಂದು ಹೇಳಿದರು.