Breaking News

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಪಾರ ಹಾನಿ ನಾಳೆ ಕಂದಾಯ ಸಚಿವ ಆರ್. ಅಶೋಕ ಭೇಟಿ

Spread the love

ಬೆಂಗಳೂರು:  ರಾಜ್ಯದಲ್ಲಿ  ಕಳೆದ ನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆ ಅಬ್ಬರಕ್ಕೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿದೆ. ಪ್ರವಾಹ ಪೀಡಿತ ಜಿಲ್ಲೆಗಳಿಗೆ ನಾಳೆ ಕಂದಾಯ ಸಚಿವ ಆರ್. ಅಶೋಕ ಭೇಟಿ ನೀಡಲಿದ್ದಾರೆ.

ಈ ವಿಚಾರವಾಗಿ  ಮಾತನಾಡಿದ ಅವರು,  ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ,  ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ಪ್ರವಾಹ ಪರಿಸ್ಥಿತಿ  ಎದುರಾಗಿದೆ. ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ/.  ಆಯಾ ಪ್ರದೇಶದಲ್ಲಿ 43 ಕಾಳಜಿ ಕೇಂದ್ರ ತೆರೆಯಲಾಗಿದೆ. 4864 ಜನರು ಆಶ್ರಯ ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದರು. 

ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚು ಹಾನಿ ಸಂಭವಿಸಿದೆ. ಮೊದಲು ಆ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ದೇನೆ ಎಂದು ತಿಳಿಸಿದರು. 


Spread the love

About Laxminews 24x7

Check Also

ಕಾರದಗಾ ಗ್ರಾಮದ ಅಭಿವೃದ್ಧಿಯೇ ನನ್ನ ಧ್ಯೇಯ

Spread the loveಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ. ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಲಾಯಿತು.ಇದಕ್ಕೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ