Breaking News
Home / ರಾಜಕೀಯ / ನವ ಕರ್ನಾಟಕ ಶೃಂಗ | ಕೃಷಿ ಉತ್ಪನ್ನ ಮೌಲ್ಯವರ್ಧನೆ ಮಾಡಿ: ಡಾ.ಪಿ.ಎಲ್.ಪಾಟೀಲ

ನವ ಕರ್ನಾಟಕ ಶೃಂಗ | ಕೃಷಿ ಉತ್ಪನ್ನ ಮೌಲ್ಯವರ್ಧನೆ ಮಾಡಿ: ಡಾ.ಪಿ.ಎಲ್.ಪಾಟೀಲ

Spread the love

ಹುಬ್ಬಳ್ಳಿ: ‘ಕೃಷಿ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿ, ಆಕರ್ಷಕ ಬ್ರ್ಯಾಂಡ್ ಮೂಲಕ ಮಾರಾಟ ಮಾಡಿದರೆ ರೈತರ ಆದಾಯ ಹತ್ತಾರುಪಟ್ಟು ಹೆಚ್ಚುತ್ತದೆ’ ಎಂದು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್. ಪಾಟೀಲ ಹೇಳಿದರು.

 

‘ರೈತರು ಮತ್ತು ನೀರಾವರಿ ಅಭಿವೃದ್ಧಿ’ ಕುರಿತು ಮಾತನಾಡಿದ ಅವರು, ‘ಹಸಿರು ಕ್ರಾಂತಿ ಆದ ನಂತರ ಕೃಷಿ ಉತ್ಪಾದನೆ ಹತ್ತು ಪಟ್ಟು ಹೆಚ್ಚಾಗಿದೆ. ಆದರೆ, ರೈತರ ಆದಾಯ ಮಾತ್ರ ಏರಿಕೆ ಆಗಿಲ್ಲ. ರೈತರ ಆದಾಯ ದ್ವಿಗುಣಗೊಳಿಸಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸು. ಸೆಕೆಂಡರಿ ಅಗ್ರಿಕಲ್ಚರ್‌ ನಿರ್ದೇಶನಾಲಯ ಸ್ಥಾಪಿಸಲಾಗಿದೆ’ ಎಂದರು.

‘ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಸಂಶೋಧನೆಗಳನ್ನು ಕೃಷಿ ವಿಸ್ತರಣೆ ವಿಭಾಗದ ಮೂಲಕ ರೈತರಿಗೆ ತಲುಪಿಸುವ ಕೆಲಸ ಆಗುತ್ತಿದೆ. ಬೆಳೆಗಳಲ್ಲಿ ಹೊಸ ತಳಿಗಳನ್ನು ಪರಿಚಯಿಸಲಾಗುತ್ತಿದೆ. ರೋಗ, ಕೀಟಬಾಧೆಗಳನ್ನು ನಿಯಂತ್ರಿಸುವುದನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗುತ್ತಿದೆ’ ಎಂದು ಹೇಳಿದರು.

ಜಲ ಮತ್ತು ನೆಲ‌ ನಿರ್ವಹಣಾ ಸಂಸ್ಥೆ (ವಾಲ್ಮಿ) ನಿರ್ದೇಶಕ ಡಾ. ರಾಜೇಂದ್ರ ಪೊದ್ದಾರ್ ಮಾತನಾಡಿ, ‘ಕೃಷ್ಣಾ ಮೇಲ್ದಂಡೆ ಯೋಜನೆ ಮೂಲಕ ಬರದ ಹಣೆಪಟ್ಟಿ ಹೊಂದಿದ್ದ ವಿಜಯಪುರ ಜಿಲ್ಲೆಯ ಇಂಡಿ, ಸಿಂದಗಿ, ಮುಧೋಳ, ಯಾದಗಿರಿ ಜಿಲ್ಲೆಯ ಶಹಾಪುರ, ಸುರಪುರ ಸೇರಿದಂತೆ ಅನೇಕ ಗ್ರಾಮಗಳಿಗೆ ನೀರಾವರಿ ಸೌಲಭ್ಯ ಸಿಕ್ಕಿದೆ. ಮುಧೋಳದಲ್ಲಿ ₹25 ಸಾವಿರ ಕೋಟಿ ಕೃಷಿ ವಹಿವಾಟು ನಡೆಯುತ್ತಿದೆ’ ಎಂದರು.

‌’ರಾಜ್ಯ ಸರ್ಕಾರ ಪ್ರಸಕ್ತ ವರ್ಷದ ಬಜೆಟ್‌ನಲ್ಲಿ ನೀರಾವರಿಗೆ ₹ 25 ಸಾವಿರ ಕೋಟಿ ನೀಡಿದೆ. ನಾರಾಯಣಪುರ ಅಣೆಕಟ್ಟೆಗೆ ಸ್ಕಾಡಾ ಗೇಟ್ ಅಳವಡಿಸಲಾಗಿದ್ದು, ಕಂಪ್ಯೂಟರ್‌ನಿಂದಲೇ ನೀರು ನಿರ್ವಹಣೆ ಮಾಡಬಹುದು. ಅಲ್ಲದೆ, ನೀರು ಪೋಲು ತಡೆಗಟ್ಟಬಹುದು’ ಎಂದು ಹೇಳಿದರು.

ಸಾವಯವ ಕೃಷಿಕ ಆನಂದ ಕಡಕೋಳ ಮಾತನಾಡಿ, ‘ಕೋವಿಡ್ ಸಂದರ್ಭದಲ್ಲಿ ಮಾವು ಬೆಳೆ ಸಾಕಷ್ಟು ಹಾಳಾಯಿತು. ಆಗ ಮೌಲ್ಯವರ್ಧನೆಯ ಕುರಿತು ಯೋಚಿಸಿದೆ. ಮಾವಿನಿಂದ ಬೇರೆಬೇರೆ ಉತ್ಪನ್ನ ತಯಾರಿಸಿ ಸಂಸ್ಕರಣೆ ಮಾಡಿದ್ದರಿಂದ ಅವುಗಳನ್ನು ರ‍‍ಫ್ತು ಮಾಡಬಹುದು. ಮಾವು ಅಷ್ಟೇ ಅಲ್ಲ, ಯಾವುದೇ ತೋಟಗಾರಿಕೆಯ ಬೆಳೆಯನ್ನೂ ಮೌಲ್ಯವರ್ಧನೆ ಮಾಡಿದರೆ ಉತ್ತಮ ಆದಾಯ ನಿರೀಕ್ಷಿಸಬಹುದು’ ಎಂದು ಹೇಳಿದರು.

‘ಸಾವಯವ ಕೃಷಿ ಮಾಡುವುದರಿಂದ ಆರಂಭದಲ್ಲಿ ಹಿನ್ನಡೆ ಆಗುತ್ತದೆ. ನಂತರದ ದಿನಗಳಲ್ಲಿ ಭೂಮಿಯ ಫಲವತ್ತತೆ ಹೆಚ್ಚುವ ಜತೆಗೆ ಉತ್ತಮ ಆದಾಯವನ್ನೂ ಪಡೆಯಬಹುದು’ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ