ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಿದ್ಧತೆ ಪರಿಶೀಲಿಸಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ಗುರುವಾರ ನಗರಕ್ಕೆ ಆಗಮಿಸಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ವಿಕಾಸಸೌಧದಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರೊಂದಿಗೆ ಸಭೆ ನಡೆಸಿದೆ.
ತಂಡವು ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಲಿದ್ದು, ಅಭಿಪ್ರಾಯಗಳನ್ನು ಆಲಿಸಲಿದೆ. ಚುನಾವಣಾ ಆಯುಕ್ತರಾದ ಅನೂಪ್ ಚಂದ್ರ ಪಾಂಡೆ, ಅರುಣ್ ಗೋಯಲ್ ಇದ್ದರು.
Laxmi News 24×7