Breaking News
Home / ರಾಜಕೀಯ / ರಾಜ್ಯದಲ್ಲಿ ಶಾಂತಿಯುತ ಮಾತದಾನವಾಗುವ ವಿಶ್ವಾಸವಿದೆ ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆ ಕೇಂದ್ರ ಸ್ಥಾಪಿಸಲಾಗುತ್ತಿದೆ

ರಾಜ್ಯದಲ್ಲಿ ಶಾಂತಿಯುತ ಮಾತದಾನವಾಗುವ ವಿಶ್ವಾಸವಿದೆ ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆ ಕೇಂದ್ರ ಸ್ಥಾಪಿಸಲಾಗುತ್ತಿದೆ

Spread the love

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಚುನಾವಣೆ ಪೂರ್ವ ಸಿದ್ಧತೆ ಬಗ್ಗೆ ಸಭೆ ನಡೆಸಿದರು. ರಾಜ್ಯದಲ್ಲಿ ಶಾಂತಿಯುತ ಮಾತದಾನವಾಗುವ ವಿಶ್ವಾಸವಿದೆ ಎಂದರು.

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣೆ ತಯಾರಿ ಬಗ್ಗೆ ಮಾಹಿತಿ ನೀಡಿದರು. ಮೇ 24ಕ್ಕೆ 15ನೇ ಈ ಸರ್ಕಾರದ ಅವಧಿ ಮುಗಿಯಲಿದೆ. ಸಾರ್ವತ್ರಿಕ ಚುನಾವಣೆಯ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಚುನಾವಣಾಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು, ಐಜಿ, ಎಸ್ ಗಳ ಜೊತೆ ಚುನಾವಣಾ ಪೂರ್ವ ಸಿದ್ಧತೆ ಬಗ್ಗೆ ಸಭೆ ನಡೆಸಿ ಚರ್ಚೆ ನಡೆಸಲಾಗಿದೆ ಎಂದರು.

ರಾಜ್ಯದಲ್ಲಿ ಒಟ್ಟು ಮತದಾರರ ಸಂಖ್ಯೆ 5,21,73,59. ಮೊದಲಬಾರಿಗೆ 9,17,241 ಜನರು ಮತದಾನ ಮಾಡುತ್ತಾರೆ. ಪುರುಷ ಮತದಾರರ ಸಂಖ್ಯೆ 2,62,42,561. ರಾಜ್ಯದಲ್ಲಿ ಮಹಿಳಾ ಮತದಾರರ ಸಂಖ್ಯೆ 2,59,26,319. 17 ವರ್ಷ ಮೇಲ್ಪಟ್ಟ 125,406 ಜನರಿಂದ ಮತದಾನಕ್ಕೆ ಅರ್ಜಿ ಸಲ್ಲಿಸಲಾಗಿದೆ. ರಾಜ್ಯದಲ್ಲಿ ಸರ್ಕಾರಿ ನೌಕರರ ಮತದಾರರ ಸಂಖ್ಯೆ 47,779.

ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆ ಕೇಂದ್ರ ಸ್ಥಾಪಿಸಲಾಗುತ್ತಿದೆ. 883 ಮತದಾರರಿರುವ ಕಡೆ ಒಂದು ಮತಗಟ್ಟೆ ಸ್ಥಾಪನೆಯಾಗಲಿದೆ. ನಗರ ಪ್ರದೇಶಗಳಲ್ಲಿ 24,063 ಮತಗಟ್ಟೆಗಳ ಸ್ಥಾಪನೆ. ಗ್ರಾಮೀಣ ಪ್ರದೇಶಗಳಲ್ಲಿ 34,219 ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತಿದ್ದು, ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯವಿರಲಿದೆ. ಅಂಗವಿಕಲರಿಗೆ ವ್ಹೀಲ್ ಚೇರ್ ವ್ಯವಸ್ಥೆ ಮಾಡಲಾಗುವುದು. 80 ವರ್ಷ ಆದವರಿಗೆ ಮನೆಯಲ್ಲೇ ಮತದಾನ ಮಾಡಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ