Breaking News

ಬಿಜೆಪಿ ತೊರೆದು ಎಚ್‌.ಡಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದ ಎ. ಮಂಜು

Spread the love

ಬಿಡದಿ (ರಾಮನಗರ): ಮಾಜಿ ಸಚಿವ ಎ. ಮಂಜು ಶನಿವಾರ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಎಚ್‌.ಡಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು.

ಬಿಡದಿಯಲ್ಲಿರುವ ಎಚ್‌.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಮಂಜು ಅವರಿಗೆ ಪಕ್ಷದ ಶಾಲು ಹಾಕಿ ಬರಮಾಡಿಕೊಂಡರು.

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ
ಎಚ್‌.ಡಿ. ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮತ್ತಿತರರು ಈ ಸಂದರ್ಭ ಹಾಜರಿದ್ದರು.

ರಾಜಕೀಯ ಜೀವನದ ಆರಂಭದಿಂದಲೂ ಹಾಸನದಲ್ಲಿ ದೇವೇಗೌಡರ ಕುಟುಂಬವನ್ನು ವಿರೋಧಿಸುತ್ತಲೇ ಬಂದಿದ್ದ ಮಂಜು ಇದೀಗ ಜೆಡಿಎಸ್‌ ಸೇರ್ಪಡೆ ಆಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಸದ್ಯ ಜೆಡಿಎಸ್ ಪಂಚರತ್ನ ಯಾತ್ರೆ ನಡೆದಿದೆ. ಇದೇ 16ರಂದು ಅರಕಲಗೂಡಿನಲ್ಲಿ ಯಾತ್ರೆಗೆ ಸಿದ್ಧತೆ ನಡೆದಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ