Breaking News
Home / ಜಿಲ್ಲೆ / ಬೆಂಗಳೂರು / ಚುನಾವಣೆಗೆ ಸಿದ್ಧತೆ; ಈ ಬಾರಿ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

ಚುನಾವಣೆಗೆ ಸಿದ್ಧತೆ; ಈ ಬಾರಿ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

Spread the love

ಬೆಂಗಳೂರು: ಕರ್ನಾಟಕದಲ್ಲಿ ಸುಮಾರು 17,000 ಮಂದಿ ಶತಾಯುಷಿಗಳಿದ್ದು, ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಚುನಾವಣಾ ಆಯೋಗ ಶನಿವಾರ (ಮಾರ್ಚ್ 11) ಘೋಷಿಸಿದೆ.

 

 

ರಾಜ್ಯದಲ್ಲಿ ಈ ಬಾರಿ ಯುವ ಮತದಾರರ ಸಂಖ್ಯೆಯೂ ಹೆಚ್ಚಳವಾಗಿದೆ ಎಂದು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಮಾಹಿತಿ ನೀಡಿದ್ದಾರೆ.

ಆಯೋಗದ ತ್ರಿಸದಸ್ಯ ಸಮಿತಿಯು ಗುರುವಾರದಿಂದ ಮೂರು ದಿನಗಳ ಕಾಲ ಕರ್ನಾಟಕಕ್ಕೆ ಭೇಟಿ ನೀಡಿ ಚುನಾವಣಾ ಸಿದ್ದತೆಗಳನ್ನು ಪರಿಶೀಲಿಸಿತು. 224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯ ಅವಧಿ ಮೇ 24ರಂದು ಕೊನೆಗೊಳ್ಳಲಿದೆ.

ರಾಜ್ಯದಲ್ಲಿ ಒಟಟು 58,282 ಮತಗಟ್ಟೆ ಸ್ಥಾಪಿಸಲಾಗುವುದು. ಒಂದು ಮತಗಟ್ಟೆಯಲ್ಲಿ 883 ಜನರು ಮತ ಚಲಾಯಿಸಬಹುದು. ನಗರ ಪ್ರದೇಶದಲ್ಲಿ 24,063 ಮತಗಟ್ಟೆ ಸ್ಥಾಪಿಸಲಾಗುವುದು. ರಾಜ್ಯದಲ್ಲಿ ಮೇ 24ಕ್ಕೂ ಮೊದಲು ಚುನಾವಣೆ ನಡೆಸಬೇಕಾಗಿದೆ. ವಿಶೇಷ ಚೇತನರಿಗೆ ವ್ಹೀಲ್ ಚೇರ್ ಸೇರಿದಂತೆ ಮನೆಯಲ್ಲಿಯೇ ಮತದಾನ ಮಾಡಲು ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದು ಆಯೋಗ ತಿಳಿಸಿದೆ.

ಯಾವುದೇ ಕಾರಣಕ್ಕೂ ಇವಿಎಂಗಳನ್ನು ಬದಲಾಯಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಕಾಂಗ್ರೆಸ್ ಪಕ್ಷದ ಮನವಿಯನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ಎಲ್ಲೆಡೆ ಬಳಸಿದ ಇವಿಎಂಗಳನ್ನೇ ಕರ್ನಾಟಕ ಚುನಾವಣೆಗೆ ಬಳಸಲಾಗುವುದು. ಈ ಹಿಂದೆಯೂ ಇವಿಎಂಗಳ ಬಗ್ಗೆ ಆರೋಪ ಕೇಳಿ ಬಂದಿತ್ತು ಎಂದು ಆಯೋಗ ಹೇಳಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 104 ಸ್ಥಾನಗಳಲ್ಲಿ ಜಯಗಳಿಸಿತ್ತು. ಕಾಂಗ್ರೆಸ್ ಪಕ್ಷ 78 ಹಾಗೂ ಜೆಡಿಎಸ್ 37 ಸ್ಥಾನಗಳಲ್ಲಿ ಗೆಲುವು ಪಡೆದಿತ್ತು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ