Breaking News

ಬಿಜೆಪಿ ಭಿನ್ನಮತ ಶಮನಕ್ಕೆ ಯತ್ನ, ಸಭೆ ನಡೆಸಿದ ಧರ್ಮೇಂದ್ರ ಪ್ರಧಾನ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಉಂಟಾಗಿರುವ ಭಿನ್ನಮತ ಶಮನಗೊಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

ನಗರಕ್ಕೆ ಆಗಮಿಸಿದ್ದ ಪಕ್ಷದ ರಾಜ್ಯ ಚುನಾವಣೆ ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಭಾನುವಾರ ಬಾಗಲಕೋಟೆ, ಬೆಳಗಾವಿ, ಹಾಗೂ ವಿಜಯಪುರ ಜಿಲ್ಲೆಗಳ ಆಯ್ದ ಸಂಸದರು, ಶಾಸಕರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದರು.

 

‘ಪಕ್ಷದ ಕೆಲವು ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ. ಹಾಗಾಗಿ ಪ್ರಧಾನ ಪ್ರತ್ಯೇಕವಾಗಿ ನಾಯಕರ ಸಭೆ ನಡೆಸಿ, ಭಿನ್ನಮತ ಶಮನಗೊಳಿಸಲು ಪ್ರಯತ್ನಿಸಿದರು. ಎಲ್ಲರೂ ಒಂದಾಗಿ ಹೋಗುವಂತೆ ಸೂಚಿಸಿದರು’ ಎಂದು ಮೂಲಗಳು ‘ಪ್ರಜಾವಾಣಿ’ಗೆ ಖಚಿತಪಡಿಸಿವೆ.

ಮೂರೂ ಜಿಲ್ಲೆಗಳ ನಾಯಕರ ಸಮಗ್ರ ಮಾಹಿತಿ ಪಡೆದುಕೊಂಡ ಪ್ರಧಾನ, ‘ಬೆಳಗಾವಿ ಜಿಲ್ಲೆಗೆ ಶೀಘ್ರ ಬಂದು ಮತ್ತೊಂದು ಹಂತದ ಸಭೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ’ ಎಂದು ಹೇಳಿವೆ.

ಗೋಕಾಕ ಶಾಸಕ ರಮೇಶ ಜಾರಕಿಹೊಳಿ ನಮ್ಮ ಕ್ಷೇತ್ರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಬೆಳಗಾವಿ ಜಿಲ್ಲೆಯ ಹಲವು ಶಾಸಕರು ಒತ್ತಾಯಿಸಿದರು ಎನ್ನಲಾಗಿದೆ.

ಈ ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಸಂಸದರಾದ ಪಿ.ಸಿ.ಗದ್ದಿಗೌಡರ, ರಮೇಶ ಜಿಗಜಿಣಗಿ, ಈರಣ್ಣ ಕಡಾಡಿ, ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಮತ್ತಿತರರು ಭಾಗವಹಿಸಿದ್ದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ