Breaking News

ಗೋವಾ: ದೆಹಲಿ ಪ್ರವಾಸಿಗರ ಮೇಲೆ ಮಾರಕಾಯುಧಗಳಿಂದ ದಾಳಿ

Spread the love

ಣಜಿ : ಪ್ರವಾಸಿ ತಾಣ ಗೋವಾಕ್ಕೆ ಭೇಟಿ ನೀಡಿದ್ದ ದೆಹಲಿಯ ಕುಟುಂಬದ ಮೇಲೆ ಅಂಜುನಾ ಪ್ರದೇಶದಲ್ಲಿ ಸ್ಥಳೀಯರು ಕತ್ತಿಗಳು ಮತ್ತು ಚಾಕುವಿನಿಂದ ಹಲ್ಲೆ ನಡೆಸಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಗೆ ಸಂಬಂಧಿಸಿ ಗೋವಾ ಪೊಲೀಸರು ಮೂವರನ್ನು ಬಂಧಿಸಿದ್ದು, ಕೊಲೆ ಯತ್ನ ಆರೋಪ ಹೊರಿಸಿದ್ದಾರೆ.

ದಾಳಿಕೋರರ ಬಗ್ಗೆ ಪೊಲೀಸರು ಮೃದು ಧೋರಣೆ ತೋರಿದ್ದಾರೆ ಎಂದು ಸಂತ್ರಸ್ತರಿಂದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತನಿಖಾಧಿಕಾರಿ ವಿರುದ್ಧ ಪ್ರಾಥಮಿಕ ತನಿಖೆಯನ್ನೂ ಆರಂಭಿಸಲಾಗಿದೆ.

ದೆಹಲಿ ನಿವಾಸಿ 47 ವರ್ಷದ ಅಶ್ವಿನಿ ಕುಮಾರ್ ಚಂದ್ರಾನಿ ಎಂಬುವವರ ಮೇಲೆ ಮಾರ್ಚ್ 5 ರಂದು ಸಂಜೆ 5 ಗಂಟೆ ಸುಮಾರಿಗೆ ಅಂಜುನ ನಿವಾಸಿಗಳು ಹಲ್ಲೆ ನಡೆಸಿದ್ದರು. ರೋಷನ್ ಮತ್ತು ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ತನಿಖೆಯ ಸಂದರ್ಭದಲ್ಲಿ, ದೇಹದ ಪ್ರಮುಖ ಭಾಗಗಳ ಮೇಲೆ ಚಾಕು ಮತ್ತು ಇತರ ಆಯುಧಗಳಿಂದ ಹಲ್ಲೆ ನಡೆಸಿರುವುದನ್ನು ಅವರು ಕಂಡುಕೊಂಡರು, ಆದ್ದರಿಂದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆಯ ಯತ್ನ) ಅನ್ನು ಅನ್ವಯಿಸಲಾಗಿದೆ ಎಂದು ಅಂಜುನಾ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ