Breaking News

ಟೋಲ್‌ ಸಂಗ್ರಹ: ಮೊದಲ ದಿನವೇ ಸೆನ್ಸಾರ್‌ ವೈಫಲ್ಯ, ಕಾರುಗಳಿಗೆ ಡ್ಯಾಮೇಜ್‌, ಆಕ್ರೋಶ

Spread the love

ಮೈಸೂರು, ಮಾರ್ಚ್‌, 14: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ ಅನ್ನು ಭಾನುವಾರ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದ್ದರು. ಇದರ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಧಿಕಾರವು ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ ‌ಟೋಲ್ ಸಂಗ್ರಹ ಮಾಡಲು ಮುಂದಾಗಿದೆ.

ಆದರೆ ಶುಲ್ಕ ಸಂಗ್ರಹಕ್ಕೆ ಮುಂದಾಗಿದ್ದ ಮೊದಲ ದಿನವೇ ಟೋಲ್‌ನ ಸೆನ್ಸಾರ್‌ಗಳಲ್ಲಿ ವೈಫಲ್ಯ ಕಾಣಿಸಿಕೊಂಡಿದೆ.

ಟೋಲ್‌ ಸೆನ್ಸಾರ್‌ಗಳು ಕಾರ್ಯನಿರ್ವಹಿಸದ ಹಿನ್ನೆಲೆ, ಮೂರ್ನಾಲ್ಕು ಕಾರುಗಳು ಡ್ಯಾಮೇಜ್‌ ಆಗಿವೆ. ಇದರಿಂದ ರೊಚ್ಚಿಗೆದ್ದ ವಾಹನ ಸವಾರರು ರಾಷ್ಟ್ರೀಯ ಹೆದ್ದಾರಿ ಪ್ರಧಿಕಾರ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಿಯಾಗಿ ವರ್ಕ್ ಆಗದ ಸೆನ್ಸಾರ್‌

ಬೆಂಗಳೂರು ದಕ್ಷಿಣದ ಕಣಿಮಿಣಿಕೆ ಮತ್ತು ರಾಮನಗರ ಬಳಿಯ ಶೇಷಗಿರಿಹಳ್ಳಿ ಟೋಲ್‌ನಲ್ಲಿದ್ದ ಸೆನ್ಸಾರ್‌ ಸರಿಯಾಗಿ ವರ್ಕ್ ಆಗದೇ ಹಲವು ವಾಹನಗಳಿಗೆ ಡ್ಯಾಮೇಜ್ ಆಗಿದೆ. ಭೀಮರ್ ಸೆನ್ಸಾರ್ ವೈಫಲ್ಯದಿಂದ ಮೂರ್ನಾಲ್ಕು ಕಾರುಗಳಿಗೆ ಡ್ಯಾಮೇಜ್ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದರಿಂದ ರೊಚ್ಚಿಗೆದ್ದ ವಾಹನ ಸವಾರರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಟೋಲ್‌ನಲ್ಲಿ ಸರಿಯಾದ ವ್ಯವಸ್ಥೆ ಮಾಡದೇ ಟೋಲ್‌ ವಸೂಲಿಗೆ ಮುಂದಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದೇ ವೇಳೆ ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೆಯೇ ಘಟನಾ ಸ್ಥಳದಲ್ಲಿ ಸ್ವಲ್ಪ ಸಮಯದವರೆಗೂ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕಪ್ಪು ಪಟ್ಟಿ ಪ್ರದರ್ಶಿಸಿ ಬಿಜೆಪಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುವಾಗ ಪೊಲೀಸರು ಕಾಂಗ್ರೆಸ್‌ ಕಾರ್ಯಕರ್ತರು ಸೇರಿದಂತೆ ಹಲವು ಸಂಘಟನೆಗಳ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್‌ ಕಾರ್ಯಕರ್ತರ ಆಕ್ರೋಶ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಅನ್ನು ಭಾನುವಾರ (ಮಾರ್ಚ್ 12) ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಿದ್ದರು. ನಂತರ ಈ ಹೆದ್ದಾರಿಯಲ್ಲಿ ವಾನಹಗಳ ಸಂಚಾರಕ್ಕೆ ಮುಕ್ತಗೊಳಿಸಲಾಗಿದ್ದು, ಮಂಗಳವಾರ (ಮಾರ್ಚ್‌ 14) ಟೋಲ್‌ ಸಂಗ್ರಹವನ್ನು ಆರಂಭ ಮಾಡಿದ್ದಾರೆ. ಈ ವಿಚಾರಕ್ಕೆ ಹಲವು ಸಂಘಟನೆಗಳ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಹಾಗಾದರೆ ಸಂಘಟನೆಗಳ ನಿಲುವು ಏನು ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ.

ಮಂಗಳವಾರ (ಮಾರ್ಚ್ 14) ರಾಷ್ಟ್ರೀಯ ಹೆದ್ದಾರಿ ಪ್ರಧಿಕಾರವು ವಾಹನ ಸವಾರರಿಂದ ಟೋಲ್ ಸಂಗ್ರಹಕ್ಕೆ ಮುಂದಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಸಂಗ್ರಹಕ್ಕೆ ಮುಂದಾಗಿದ್ದು, ಸುಮಾರು 55 ಕಿ.ಮೀ. ಹೆದ್ದಾರಿಗೆ ಬೆಳಗ್ಗೆ 8 ಗಂಟೆಯಿಂದಲೇ ಟೋಲ್ ಸಂಗ್ರಹಿಸಲು ಮುಂದಾಗಿದ್ದರು.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ