Breaking News

ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆ?

Spread the love

ಬೆಂಗಳೂರು: ರಾಜ್ಯ ಸೇರಿ ದೇಶಾದ್ಯಂತ ತಾಪಮಾನ ಏರಿಕೆಯಾಗುತ್ತಲೇ ಇದೆ. ಬಿಸಿಲ ಧಗೆ ರಾಜ್ಯದಲ್ಲಿ ನಿಧಾನವಾಗಿಯೇ ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.

ಸಮುದ್ರಗಳಲ್ಲಿ ಮೆಲ್ಮೈ ಸುಳಿ ಕಾಣಿಸಿಕೊಂಡಿರೋ ಕಾರಣ ರಾಜ್ಯದ ನಾನಾ ಕಡೆ ಇಂದಿನಿಂದ 5 ದಿನ ಮಳೆಯಾಗುವ ಸಾಧ್ಯತೆ ಎಂದು ಮಾಹಿತಿ ನೀಡಿದೆ.

ಮಾರ್ಚ್‌ 14 ರಿಂದ 18 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಹಾಗೂ ಮಾರ್ಚ್‌ 16 ರಿಂದ 18 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಸಹ ಮಾರ್ಚ್‌ 17 ಹಾಗೂ 18 ರಂದು ಹಗುರ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆ ತಿಳಿಸಿದೆ. ಅದೇ ರೀತಿ, ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್‌, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವೆಡೆ ಮಾರ್ಚ್‌ 16 ರಿಂದ ಮಾರ್ಚ್‌ 18 ರವರೆಗೆ ಮಳೆಯಾಗುವ ಸಾಧ್ಯತೆ ಇದೆ.

ಕಾರವಾರದಲ್ಲಿ ಸೋಮವಾರ ರಾಜ್ಯದಲ್ಲೇ ಗರಿಷ್ಠ 37.1 ಡಿಗ್ರಿ ಸೆಲ್ಶಿಯಸ್‌ ಹಾಗೂ ಬಾಗಲಕೋಟೆಯಲ್ಲಿ ಕನಿಷ್ಠ 14 ಡಿಗ್ರಿ ಸೆಲ್ಶಿಯಸ್‌ ತಾಪಮಾನ ದಾಖಲಾಗಿದೆ ಎಂದೂ ಐಎಂಡಿ ಮಾಹಿತಿ ನೀಡಿದೆ.

ಕರಾವಳಿಭಾಗದಲ್ಲಿಇಂದಿನಿಂದಲೇಮಳೆ..!
ರಾಜ್ಯದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಸೇರಿಕೊಂಡು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ ಎಂದು ಇಲಾಖೆತಿಳಿಸಿದೆ. ಈ ಮಧ್ಯೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಲೇ ಇದ್ದು, ಮಂಗಳೂರಿನಲ್ಲಿ ಮಾರ್ಚ್‌ 13 ರಂದು ಗರಿಷ್ಠ 35 ಡಿಗ್ರಿ ಸೆಲ್ಶಿಯಸ್‌ ದಾಖಲಾಗಿತ್ತು. ಇಂದು ಹಾಗೂ ನಾಳೆ 36ಕ್ಕೆ ಏರಿಕೆಯಾಗಬಹುದು ಹಾಗೂ ಮಾರ್ಚ್‌ 16 ರ ನಂತರ ಗರಿಷ್ಠ ತಾಪಮಾನ 38 ಡಿಗ್ರಿಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ. ರಾಜ್ಯದಲ್ಲಿ ಮಾತ್ರವಲ್ಲ ದೇಶದ 10 ರಾಜ್ಯಗಳಲ್ಲಿ 6 ದಿನಗಳ ಕಾಲ ಮಳೆಯಾಗಬಹುದು ಎಂದೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ